ಮಂಗಳವಾರ, ಮಾರ್ಚ್ 31, 2020
19 °C

ಪ್ರಧಾನಿ ಮೋದಿ ವಿರುದ್ಧ ಪೋಸ್ಟ್‌ ಹಾಕಿದ ವ್ಯಕ್ತಿ ಮನೆಗೆ ಶ್ರೀರಾಮ ಸೇನೆ ಮುತ್ತಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡಿದ ತಾಲ್ಲೂಕಿನ ವಡ್ಡರಹಳ್ಳಿ ನಿವಾಸಿ ನಬಿ ರಸೂಲ್‌ ಅವರ ಮನೆಗೆ ಶುಕ್ರವಾರ ಶ್ರೀರಾಮ ಸೇನೆಯ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ನಬಿ ಅವರನ್ನು ಮನೆಯಿಂದ ಹೊರಗೆ ಕರೆಸಿ ಗ್ರಾಮಸ್ಥರ ಸಮ್ಮುಖದಲ್ಲಿ ಕ್ಷಮೆ ಕೇಳಿಸಿದರು. ನಂತರ ‘ಭಾರತ್‌ ಮಾತಾ ಕೀ ಜೈ’ ಎಂದು ಘೋಷಣೆ ಕೂಗಿಸಿದರು. 

‘ನಬಿ ಅವರು ಮೋದಿ ಅವರ ಛಾಯಾಚಿತ್ರಗಳನ್ನು ಎಡಿಟ್‌ ಮಾಡಿ, ಅವರನ್ನು ಅಪಮಾನಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದರು. ವಿಷಯ ತಿಳಿದು ಅವರ ಮನೆಗೆ ಹೋಗಿ ಅಲ್ಲಿ ಪ್ರತಿಭಟನೆ ನಡೆಸಲಾಗಿದೆ. ಗ್ರಾಮಸ್ಥರ ಸಮ್ಮುಖದಲ್ಲಿ ಕ್ಷಮೆ ಕೇಳಿಸಲಾಗಿದೆ. ಇಂತಹ ಘಟನೆಗಳು ಪುನರಾವರ್ತನೆ ಆಗಬಾರದು ಎಂದು ಎಚ್ಚರಿಕೆ ಕೊಡಲಾಗಿದೆ’ ಎಂದು ಸೇನೆಯ ಕಾರ್ಯಾಧ್ಯಕ್ಷ ಅನೂಪ್‌ ಕುಮಾರ್‌ ತಿಳಿಸಿದರು.

ಸೇನೆಯ ತಾಲ್ಲೂಕು ಅಧ್ಯಕ್ಷ ಜಗದೀಶ್‌ ಕಾಮಟಗಿ, ಮುಖಂಡರಾದ ಕಿಚಿಡಿ ಲಕ್ಷ್ಮಣ, ಬಂಗಾರು ಸೂರಿ, ಸಪ್ತಗಿರಿ, ರಾಜಾಹುಲಿ, ಹುಲುಗಪ್ಪ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು