ಸೋಮವಾರ, ಜನವರಿ 20, 2020
25 °C

ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಶ್ರೀನಿವಾಸ ಪ್ರಸಾದ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹೃದಯದ ಆ್ಯಂಜಿಯೋ ಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಚಾಮರಾಜನಗರ ಸಂಸದ ವಿ. ಶ್ರೀನಿವಾಸ ಪ್ರಸಾದ್‌ ಅವರು ಮಂಗಳವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

ಇಂದು ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿದ ಶ್ರೀನಿವಾಸ್‌ ಪ್ರಸಾದ್‌ ಕುಷಲೋಪರಿ ವಿಚಾರಿಸಿದ್ದಾರೆ. ಇಬ್ಬರೂ ಕೆಲ ಕಾಲ ಚರ್ಚೆ ನಡೆಸಿದ್ದಾರೆ. ಈ ಕುರಿತು ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದಾರೆ. 

ಮೂರು ವರ್ಷಗಳ ಹಿಂದೆ ಸಿದ್ದರಾಮಯ್ಯ ಅವರು ತಮ್ಮ ಸಂಪುಟದಿಂದ ಶ್ರೀನಿವಾಸ್‌ ಪ್ರಸಾದ್‌ ಅವರನ್ನು ಕೈಬಿಟ್ಟ ನಂತರ ಇಬ್ಬರ ನಡುವೆ ಮುನಿಸು ಮನೆ ಮಾಡಿತ್ತು. ನಂತರ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ಶ್ರೀನಿವಾಸ ಪ್ರಸಾದ್‌,  ಸಿದ್ದರಾಮಯ್ಯ ಅವರನ್ನು ಬಹಿರಂಗವಾಗಿ ಏಕವಚನದಲ್ಲೇ ಟೀಕಿಸಿದ್ದರು. ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ ಸೇರಿದ್ದ ಅವರು ನಂಜನಗೂಡು ವಿಧಾನಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಉಪ ಚುನಾವಣೆಗೆ ಸ್ಪರ್ಧಿಸಿ ಕಾಂಗ್ರೆಸ್‌ ಅಭ್ಯರ್ಥಿ ವಿರುದ್ಧ ಸೋಲುಂಡಿದ್ದರು. ಚುನಾವಣೆ ಸೋಲು ಇಬ್ಬರೂ ನಾಯಕರ ನಡುವಿನ ಮುನಿಸನ್ನು ಮತ್ತಷ್ಟು ಹೆಚ್ಚಿಸಿತ್ತು.  

ನಂತರದ ದಿನಗಳಲ್ಲಿ ಶ್ರೀನಿವಾಸ ಪ್ರಸಾದ್‌ ಅವರು ಹಲವು ವೇದಿಕೆಗಳಲ್ಲಿ ಸಿದ್ದರಾಮಯ್ಯ ಅವರನ್ನು ಏಕ ವಚನದಲ್ಲೇ ಟೀಕಿಸಿದ್ದರು. ಸದ್ಯ ಸಿದ್ದರಾಮಯ್ಯ ಅವರ ಅನಾರೋಗ್ಯ ಇಬ್ಬರೂ ನಾಯಕರನ್ನು ಒಂದೆಡೆ ಬೆಸೆದಿದ್ದು,  ಈ  ಭೇಟಿ ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. 

ಇನ್ನಷ್ಟು... 

ಸಿದ್ದರಾಮಯ್ಯ ಅನಾಗರಿಕ: ಶ್ರೀನಿವಾಸ ಪ್ರಸಾದ್ ವಾಗ್ದಾಳಿ 

ಸಿದ್ದರಾಮಯ್ಯ ಆತ್ಮಾವಲೋಕನ ಮಾಡಿಕೊಳ್ಳಲಿ: ಸಂಸದ ಶ್ರೀನಿವಾಸ ಪ್ರಸಾದ್‌ ವ್ಯಂಗ್ಯ

ಸಿದ್ದರಾಮಯ್ಯ ದಲಿತ ವಿರೋಧಿ: ಶ್ರೀನಿವಾಸ ಪ್ರಸಾದ್‌

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು