ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ಅನಾಗರಿಕ: ಶ್ರೀನಿವಾಸ ಪ್ರಸಾದ್ ವಾಗ್ದಾಳಿ 

Last Updated 6 ಮೇ 2019, 9:49 IST
ಅಕ್ಷರ ಗಾತ್ರ

ಚಾಮರಾಜನಗರ:'ಕಾಂಗ್ರೆಸ್‌ ಮುಖಂಡ, ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಅನಾಗರಿಕ. ಸಂಸ್ಕೃತಿ ಗೊತ್ತಿಲ್ಲದವರು. ಹಾಗಾಗಿ ಪ್ರಧಾನಿ ಬಗ್ಗೆ ಏಕವಚನದಲ್ಲಿ ಮಾತನಾಡುತ್ತಾರೆ' ಎಂದು ಬಿಜೆಪಿ ಮುಖಂಡ, ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ವಿ.ಶ್ರೀನಿವಾಸ ಪ್ರಸಾದ್ ಅವರು ಸೋಮವಾರ ವಾಗ್ದಾಳಿ ನಡೆಸಿದರು.

ಪತ್ರಿಕಾಗೋಷ್ಠಿಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಸಿದ್ದರಾಮಯ್ಯ ಉಡಾಫೆ ವ್ಯಕ್ತಿ. ಮುಖ್ಯಮಂತ್ರಿಯಾಗಿದ್ದವರು ದೇಶದ ಪ್ರಧಾನಿ ಬಗ್ಗೆ ಈ ರೀತಿ ಮಾತನಾಡುತ್ತಾರೆಯೇ' ಎಂದು ಪ್ರಶ್ನಿಸಿದರು.

‘ಎದುರಾಳಿಗಳ ಬಗ್ಗೆ ಗೌರವಯುತವಾಗಿ ಮಾತನಾಡಬೇಕು ಎಂದು ಕಾಂಗ್ರೆಸ್‌ ಅಭ್ಯರ್ಥಿ ಧ್ರುವನಾರಾಯಣ ಅವರು ನನಗೆ ಸಲಹೆ ನೀಡಿದ್ದರು. ಇದನ್ನು ಈಗ ಅವರು ಸಿದ್ದರಾಮಯ್ಯ ಅವರಿಗೆ ಹೇಳಲಿ’ ಎಂದರು.

'ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಕೇವಲ 1,200 ಮತಗಳ ಅಂತರದಿಂದ ಗೆದ್ದಿದ್ದಾರೆ. ಸಂಪುಟದಲ್ಲಿದ್ದ ಹಲವರು ಸೋತಿದ್ದಾರೆ. ಚುನಾವಣೆಯಲ್ಲಿ ಸೋತು ಸುಣ್ಣವಾಗಿದ್ದರೂ, 125 ಕೋಟಿ ಜನರ ಪ್ರಧಾನಿ ಬಗ್ಗೆ ಈ ರೀತಿ ಮಾತನಾಡಲು ನಾಚಿಕೆ ಆಗುವುದಿಲ್ಲವೇ' ಎಂದು ಹರಿಹಾಯ್ದರು.

ಪ್ರತಿಕ್ರಿಯಿಸುವುದಿಲ್ಲ

'ಲೋಕಸಭಾ ಚುನಾವಣೆ ಫಲಿತಾಂಶದ ನಂತರ ರಾಜ್ಯ ಸರ್ಕಾರ ಬೀಳುತ್ತದೆಯೇ ಇಲ್ಲವೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಕೇಂದ್ರದಲ್ಲಿ ಎನ್‌ಡಿಎಯನ್ನು ಮತ್ತೆ ಅಧಿಕಾರಕ್ಕೆ ತರುವುದು, ರಾಜ್ಯದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಷ್ಟೇ ನಮ್ಮ ಗುರಿ. ಆದರೆ, ರಾಜ್ಯದಲ್ಲಿರುವ ದೋಸ್ತಿಗಳ ನಡುವೆ ಸಮನ್ವಯ ಇಲ್ಲ.ಚುನಾವಣೆಯ ಸಂದರ್ಭದಲ್ಲೇ ಇದು ಗೊತ್ತಾಗಿದೆ' ಎಂದರು.

ಗೆಲ್ಲುವ ವಿಶ್ವಾಸ

'ಕ್ಷೇತ್ರದ ಜನರು ಉತ್ತಮವಾಗಿ ಬೆಂಬಲಿಸಿದ್ದಾರೆ. ಗೆಲ್ಲುವ ವಿಶ್ವಾಸವಿದೆ. ರಾಜ್ಯದಲ್ಲಿ 20 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ' ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT