ಬೆಂಗಳೂರು: ಮುಖವನ್ನೂ ನೋಡುವು ದಿಲ್ಲ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಲೇ ಬಂದಿದ್ದ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಮಂಗಳವಾರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಆಂಜಿಯೊ ಪ್ಲಾಸ್ಟಿ ಚಿಕಿತ್ಸೆ ನಂತರ ‘ಕಾವೇರಿ’ಯಲ್ಲಿ ವಿಶ್ರಾಂತಿ ಪಡೆಯು ತ್ತಿರುವ ಸಿದ್ದರಾಮಯ್ಯ ಅವರನ್ನು ಮಂಗಳವಾರ ಭೇಟಿಯಾದರು. ಕೆಲ ಹೊತ್ತು ಆತ್ಮೀಯವಾಗಿ ಮಾತುಕತೆಯಲ್ಲಿ ತೊಡಗಿದ್ದರು. ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ಸಿದ್ದರಾಮಯ್ಯ ಸಂಪುಟದಲ್ಲಿ ಶ್ರೀನಿವಾಸ ಪ್ರಸಾದ್ ಕಂದಾಯ ಸಚಿವ ರಾಗಿದ್ದರು. ಸಚಿವ ಸ್ಥಾನದಿಂದ ಕೈಬಿಟ್ಟ ನಂತರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೇ ಸಿಟ್ಟಿನಿಂದ ಪಕ್ಷ ತೊರೆದು ಬಿಜೆಪಿ ಸೇರಿದ್ದರು. ಈ ಕಹಿ ನೆನಪು ಮರೆತು ಇಬ್ಬರೂ ಕೆಲಹೊತ್ತು ಮಾತುಕತೆ ಮೂಲಕ ಕಾಲ ಕಳೆದರು.

ಮಾಜಿ ಸಂಸದ ಕೆ.ಎಚ್.ಮುನಿ ಯಪ್ಪ, ಮಾಜಿ ಶಾಸಕ ವರ್ತೂರು ಪ್ರಕಾಶ್ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.