ಮಂಗಳವಾರ, ಸೆಪ್ಟೆಂಬರ್ 17, 2019
24 °C
ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದಿದ್ದ ಆರೋಗ್ಯ ಸಚಿವ

ಡಿಕೆಶಿ ಅಣ್ಣನವರೇ ಕ್ಷಮಿಸಿ: ಶ್ರೀರಾಮುಲು

Published:
Updated:

ಚಿತ್ರದುರ್ಗ: ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಕುರಿತು ಆಡಿದ ಮಾತಿಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಕ್ಷಮೆ ಕೇಳಿದ್ದಾರೆ.

‘ಉಪ್ಪು ತಿಂದವರು ನೀರು ಕುಡಿಯಲೇ ಬೇಕು’ ಎಂಬ ಶ್ರೀರಾಮುಲು ಹೇಳಿಕೆಯನ್ನು ಉಲ್ಲೇಖಿಸಿ ಡಿ.ಕೆ.ಶಿವಕುಮಾರ್ ಕಣ್ಣೀರು ಹಾಕಿದ್ದರು.

‘ಡಿಕೆಶಿ ಅಣ್ಣನವರೇ ಕ್ಷಮಿಸಿ. ನನ್ನ ಹೇಳಿಕೆಯಿಂದ ನೋವಾಗಿದ್ದರೆ ಕೈಮುಗಿದು ಕೇಳುತ್ತೇನೆ ದಯವಿಟ್ಟು ಕ್ಷಮಿಸಿ.. ಈ ವಿಚಾರದಲ್ಲಿ ನಾನು ಟೀಕೆ ಮಾಡಲ್ಲ’ ಎಂದು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದ ಹೊನ್ನೂರು ಗ್ರಾಮದಲ್ಲಿ ಹೇಳಿಕೆ ನೀಡಿದ್ದಾರೆ.

‘ರಾಜಕೀಯವಾಗಿ ಮಾತ್ರ ನಾನು ಮಾತನಾಡುತ್ತಿದ್ದೆ. ಯಾವುದೇ ಬೇರೆ ಉದ್ದೇಶದಿಂದ ಈ ಹೇಳಿಕೆ ನೀಡಿಲ್ಲ. ಕಾನೂನು ಏನು ಮಾಡಬೇಕೋ ಅದನ್ನು ಮಾಡುತ್ತೆ. ಇಂಥ ಸಂದರ್ಭದಲ್ಲಿ ಚುಚ್ಚಿ ಮಾತನಾಡಬಾರದು’ ಎಂದಿದ್ದಾರೆ.

Post Comments (+)