ಭಾನುವಾರ, ಜೂಲೈ 5, 2020
28 °C

ಆಯುಷ್‌ ವೈದ್ಯರ ವೇತನ ಹೆಚ್ಚಳ: ಶ್ರೀರಾಮುಲು ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸರ್ಕಾರಿ ಆಯುಷ್‌ ವೈದ್ಯರ ವೇತನ ಹೆಚ್ಚಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದ ಆಯುಷ್‌ ಇಲಾಖೆ ವೈದ್ಯರು ಮತ್ತು ಸಿಬ್ಬಂದಿ ಜತೆ ಮಾತುಕತೆಯ ಬಳಿಕ ಈ ವಿಷಯ ತಿಳಿಸಿದರು.

ಮಾತುಕತೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂದಕ್ಕೆ ಪಡೆಯುವಂತೆ ಅವರು ಮನವಿ ಮಾಡಿದರು.

ಅಲೋಪತಿ ಗುತ್ತಿಗೆ ವೈದ್ಯರಿಗೆ ಯಾವ ಆಧಾರದಲ್ಲಿ ವೇತನ ಹೆಚ್ಚಿಸಲಾಗಿದೆಯೋ ಅದೇ ಮಾನದಂಡದ ಆಧಾರದ ಮೇಲೆ ಆಯುಷ್ ವೈದ್ಯರ ವೇತನ ಹೆಚ್ಚಿಸಲಾಗುವುದು. ಈ ಬಗ್ಗೆ ಆರ್ಥಿಕ ಇಲಾಖೆಗೆ ತಕ್ಷಣವೇ ಕಡತ ಸಲ್ಲಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಆಯುಷ್‌ ಯುಜಿ ಮತ್ತು ಪಿಜಿ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ಹೆಚ್ಚಿಸಲು ಮತ್ತು ವಿಶೇಷ ನೇಮಕಾತಿ ಮೂಲಕ ಆಯುಷ್‌ ವೈದ್ಯರ ನೇಮಕ ಮಾಡುವುದಾಗಿಯೂ ಅವರು ಭರವಸೆ ನೀಡಿದರು.

 

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು