ಸೋಮವಾರ, ಅಕ್ಟೋಬರ್ 21, 2019
23 °C

ಶ್ರೀರಾಮುಲುಗೆ ಡಿಸಿಎಂ: ವಾಲ್ಮೀಕಿ ಶ್ರೀಗಳ ಗಡುವು

Published:
Updated:

ಬಾಗಲಕೋಟೆ: ‘ಮುಂದಿನ ಉಪ ಚುನಾವಣೆ ಒಳಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ಕೊಡದಿದ್ದರೆ ನಮ್ಮ ಸಮುದಾಯ ನಿಮಗೆ ತಕ್ಕ ಪಾಠ ಕಲಿಸಲಿದೆ’ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ನಾಲ್ಕನೇ ಅತಿದೊಡ್ಡ ಸಮುದಾಯವಾದ ವಾಲ್ಮೀಕಿ ಸಮಾಜವನ್ನು ಬಿಜೆಪಿ ವೋಟ್‌ಬ್ಯಾಂಕ್ ಮಾಡಿಕೊಂಡಿದೆ. ನಮ್ಮ ಸಮುದಾಯದ ಪ್ರತಿನಿಧಿಗೆ ಉಪ ಮುಖ್ಯಮಂತ್ರಿ ಸ್ಥಾನ ಕೊಡುವುದಾಗಿ ಚುನಾವಣೆಗೂ ಮುನ್ನ ಬಿಜೆಪಿ ಹೈಕಮಾಂಡ್ ನಮಗೆ ಮಾತು ಕೊಟ್ಟಿತ್ತು’ ಎಂದು ಹೇಳಿದರು.

‘ಕೊಟ್ಟ ಮಾತು ಉಳಿಸಿಕೊಳ್ಳುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ರಾಜ್ಯ ಘಟಕ ಅಧ್ಯಕ್ಷ ನಳಿನ್‌ಕುಮಾರ ಕಟೀಲ್ ಅವರಿಗೆ ಮನವಿ ಮಾಡುತ್ತೇನೆ. ಉಪ ಚುನಾವಣೆ ಒಳಗೆ ಆ ಕೆಲಸ ಮಾಡಿದರೆ ಇನ್ನೂ ಸಂತೋಷ. ಸೋತವರಿಗೆ ಸಚಿವ ಸ್ಥಾನ ನೀಡಿ, ಡಿ.ಸಿ.ಎಂ ಮಾಡಿರುವುದು ಅಚ್ಚರಿಯ ವಿಷಯ. ಆದರೆ ಅದು ಆ ಪಕ್ಷದ ಆಂತರಿಕ ವಿಚಾರ. ಒಟ್ಟಾರೆ ನಮ್ಮ ಸಮುದಾಯಕ್ಕೆ ಸರ್ಕಾರದಲ್ಲಿ ಆದ್ಯತೆ ನೀಡಬೇಕು’ ಎಂದು ಅವರು ಒತ್ತಾಯಿಸಿದರು.

Post Comments (+)