ಮಂಗಳವಾರ, ನವೆಂಬರ್ 19, 2019
27 °C

ಸಚಿವರ ‘ಆಸ್ಪತ್ರೆ ವಾಸ್ತವ್ಯ’

Published:
Updated:

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ರಾತ್ರಿ ವಾಸ್ತವ್ಯ ಮಾಡಲಾಗುವುದು ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಸೋಮವಾರ ತಿಳಿಸಿದರು.

‘ಕೆಲ ಆಸ್ಪತ್ರೆಗಳ ಪಟ್ಟಿ ಮಾಡಿದ್ದು, ಅಲ್ಲಿ ವಾಸ್ತವ್ಯ ಮಾಡುತ್ತೇನೆ. ಇದರಿಂದ ಆಸ್ಪತ್ರೆಗಳ ಗುಣಮಟ್ಟ ಹೆಚ್ಚಳಕ್ಕೆ ಸಹಕಾರಿಯಾಗಲಿದೆ. ಅಲ್ಲಿನ ಸ್ಥಿತಿಗತಿ, ಸಿಬ್ಬಂದಿ ಕೊರತೆ, ರೋಗಿಗಳ ಸಮಸ್ಯೆ ಆಲಿಸುತ್ತೇನೆ’ ಎಂದರು.

ಖಾಸಗಿ ಕ್ಲಿನಿಕ್ ನಡೆಸುವ ಸರ್ಕಾರಿ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅಂತಹ ವೈದ್ಯರನ್ನು ಗುರುತಿಸಿ ಕೆಲಸದಿಂದ ವಜಾಗೊಳಿಸಲಾಗುವುದು. ಕ್ಲಿನಿಕ್‌ಗಳಿಂದ ಬಡವರಿಗೆ ತೊಂದರೆ‌ಯಾಗುತ್ತಿದ್ದು, ಸಂಬಂಧಿಸಿದ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸರ್ಕಾರದಲ್ಲಿ ಹಣಕಾಸಿನ ಕೊರತೆ ಇಲ್ಲ. ಹೊಸ ಕಾಮಗಾರಿಗಳಿಗೂ ಹಣ ಬಿಡುಗಡೆ ಮಾಡಲಾಗುತ್ತಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ಪ್ರತಿಕ್ರಿಯಿಸಿ (+)