ಭಾನುವಾರ, ಮಾರ್ಚ್ 29, 2020
19 °C

ಎಸ್ಸೆಸ್ಸೆಲ್ಸಿ ಪರೀಕ್ಷೆ ಬಗ್ಗೆ ಏಪ್ರಿಲ್ 20ರ ಬಳಿಕ ನಿರ್ಧಾರ ಎಂದ ಸರ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊರೊನಾ ಸೋಂಕು ತಡೆಗಟ್ಟುವ ಸಲುವಾಗಿ ಇಡೀ ರಾಷ್ಟ್ರದಲ್ಲಿ ಏಪ್ರಿಲ್ 15ರ ವರೆಗೆ ಲಾಕ್‌ಡೌನ್ ಘೋಷಿಸಿರುವ ಕಾರಣ ಎಸ್ಸೆಸ್ಸೆಲ್ಸಿ ಪರೀಕ್ಷೆ  ಕುರಿತು ಏ.20ರ ಬಳಿಕ ನಿರ್ಧರಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.

‘7, 8 ಮತ್ತು 9ನೇ ತರಗತಿ ಪರೀಕ್ಷೆಗಳನ್ನು ಸಹ ಏ.20ರ ವರೆಗೆ ಮುಂದೂಡಲಾಗಿದೆ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಗುರುವಾರ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಶಾಲೆಗಳಲ್ಲಿ 2020-21ನೇ ಸಾಲಿನ ದಾಖಲಾತಿ ಹಾಗೂ ಶಿಕ್ಷಣ ಹಕ್ಕುಕಾಯ್ದೆಯಡಿಯಲ್ಲಿ (ಆರ್.ಟಿ.ಇ)ಮಕ್ಕಳ ದಾಖಲಾತಿ ಪ್ರಕ್ರಿಯೆಗಳನ್ನು ಸಹ ಏ.20ರ ವರೆಗೆ ಮುಂದೂಡಲಾಗಿದೆ, ಆ ಬಳಿಕವಷ್ಟೇ ಈ ಎಲ್ಲ ವಿಷಯಗಳಲ್ಲಿ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾ
ಗುವುದು ಎಂದು ತಿಳಿಸಲಾಗಿದೆ.

ಸುಳ್ಳು ಸುದ್ದಿ: ‘ಸಾಮಾಜಿಕ ಜಾಲತಾಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದಾಗಿದೆ ಎಂಬಒಂದು ಅಪ್ಪಟ ಸುಳ್ಳು ಸುದ್ದಿ ಹರಿದಾಡುತ್ತಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದುಮಾಡುವ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಪರೀಕ್ಷೆಗಳ ಕುರಿತು ಚರ್ಚಿಸಲು ಸಭೆಯೂ ಆಗಿಲ್ಲ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್ ಕುಮಾರ್‌  ಗುರುವಾರ ಸ್ಪಷ್ಟಪಡಿಸಿದ್ದಾರೆ.

ಟಿಇಟಿ ಪರೀಕ್ಷೆ ಮುಂದಕ್ಕೆ

ಕೊರೊನಾ ಲಾಕ್‌ಟೌನ್ ಘೋಷಿಸಿರುವ ಕಾರಣ ಏಪ್ರಿಲ್ 11ರಂದು ನಡೆಸಲು ಉದ್ದೇಶಿಸಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು (ಟಿಇಟಿ) ಮುಂದೂಡಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು