ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಶ್ನೆಪತ್ರಿಕೆ ಸೋರಿಕೆ: ಕಟ್ಟೆಚ್ಚರಕ್ಕೆ ಸೂಚನೆ

ಪರೀಕ್ಷಾ ಸುರಕ್ಷಾ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಭೆ
Last Updated 16 ಫೆಬ್ರುವರಿ 2019, 20:00 IST
ಅಕ್ಷರ ಗಾತ್ರ

ಬೆಂಗಳೂರು: ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗದಂತೆ ಕಟ್ಟೆಚ್ಚರ ವಹಿಸುವಂತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಪರೀಕ್ಷಾ ಸುರಕ್ಷಾ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಕುಮಾರಸ್ವಾಮಿ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಶನಿವಾರ ಸಭೆ ನಡೆಸಿ ಸಮಾಲೋಚಿಸಿದರು.

ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಭದ್ರತೆ ಕೈಗೊಳ್ಳಬೇಕು. ಪರೀಕ್ಷೆಗೆ ಯಾವುದೇ ಅಡಚಣೆಯಾಗದಂತೆ ನೋಡಿಕೊಳ್ಳಬೇಕು. ಈ ಹಿಂದೆ ಪ್ರಶ್ನೆ‍ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳ ಮೇಲೆ ತೀವ್ರ ನಿಗಾ ಇಡಬೇಕು ಎಂದೂ ಕೀತು ಮಾಡಿದರು. ಅಹಿತಕರ ಘಟನೆಗಳು ನಡೆಯದಂತೆ ಗೃಹ ಇಲಾಖೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ನಿರ್ದೇಶನ ನೀಡಿದರು.

ವಿದ್ಯಾರ್ಥಿಗಳು ನಿರಾತಂಕವಾಗಿ ಪರೀಕ್ಷೆ ಬರೆಯಲು ಪೂರಕ ವಾತಾವರಣ ನಿರ್ಮಿಸಬೇಕು. ಅಂತೆಯೇ, ವಿದ್ಯಾರ್ಥಿಗಳು ಓದಿನ ಕಡೆಗೆ ಹೆಚ್ಚಿನ ಗಮನ ಹರಿಸಿ, ಸಾಮಾಜಿಕ ಜಾಲತಾಣಗಳಿಂದ ದೂರ ಉಳಿಯಬೇಕು ಎಂದು ಸಲಹೆ ನೀಡಿದರು.

‘ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಅದಕ್ಕಾಗಿ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ. ಹೀಗಾಗಿ, ಪೋಷಕರು ಎಚ್ಚರಿಕೆ ವಹಿಸುವಂತೆ ಅರಿವು ಮೂಡಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಪಿಯು ಮಂಡಳಿ ನಿರ್ದೇಶಕ ಪಿ.ಸಿ.ಜಾಫರ್ ಸುದ್ದಿಗಾರರೊಂದಿಗೆ ಮಾತನಾಡಿ, ‘ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯ ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುತ್ತದೆ. ಪ್ರಶ್ನೆಪತ್ರಿಕೆ ಸೋರಿಕೆಯಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದರು.

ಈ ಬಾರಿಯ ಮೌಲ್ಯಮಾಪನಕ್ಕೆ ಯಾವುದೇ ಸಮಸ್ಯೆ ಆಗುವುದಿಲ್ಲ. ಈಗಾಗಲೇ ಉಪನ್ಯಾಸಕರ ಜತೆಗೆ ಚರ್ಚೆ ನಡೆಸಿ ಅವರ ಅಹವಾಲುಗಳನ್ನು ಆಲಿಸಲಾಗಿದೆ. ಮೇ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟವಾಗಲಿದೆ’ ಎಂದರು.

ಕಳೆದ ವರ್ಷದಿಂದ ಎಸ್ಸೆಸ್ಸೆಲ್ಸಿ ಪ್ರವೇಶಪತ್ರವನ್ನು ಆನ್‌ಲೈನ್‌ನಲ್ಲಿ ನೀಡಲಾಗುತ್ತಿದೆ. ಈ ವರ್ಷದಿಂದ ಪಿಯುಸಿ ಪ್ರವೇಶಪತ್ರವನ್ನು ಆನ್‌ಲೈನ್‌ ಮೂಲಕ ನೀಡಲಾಗುತ್ತದೆ. ಪ್ರಶ್ನೆಪತ್ರಿಕೆ ಸಾಗಣೆ ಮಾಡುವ ವಾಹನಗಳಿಗೆ ಜಿಪಿಎಸ್‌ ವ್ಯವಸ್ಥೆ ಅಳವಡಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT