ಭಾನುವಾರ, ಏಪ್ರಿಲ್ 5, 2020
19 °C

ಏ.20ರ ಬಳಿಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ದಿನಾಂಕ ನಿರ್ಧಾರ: ಶಿಕ್ಷಣ ಇಲಾಖೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ ದಿನಾಂಕವನ್ನು ಏಪ್ರಿಲ್ 20ರ ಬಳಿಕವಷ್ಟೇ ನಿರ್ಧರಿಸಲಾಗುವುದು ಎಂದು ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಏಪ್ರಿಲ್‌ 14ರವರೆಗೆ ದೇಶದಾದ್ಯಂತ ಲಾಕ್‌ಡೌನ್‌ ಇರಲಿದ್ದು, ನಂತರದ ದಿನಗಳಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಪರೀಕ್ಷೆ ದಿನಾಂಕದ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಅದೇ ರೀತಿ 7,8,9ನೇ ತರಗತಿ ಪರೀಕ್ಷೆಗಳನ್ನು ನಡೆಸುವ ಬಗ್ಗೆಯೂ ಏ.20ರ ಬಳಿಕವಷ್ಟೇ ನಿರ್ಧಾರ ಮಾಡಲಾಗುವುದು.

ಆರ್‌ಟಿಇ ಅಡಿಯಲ್ಲಿ ಮಕ್ಕಳ ದಾಖಲಾತಿ, ಹಾಗೂ 2020–21ನೇ ಸಾಲಿನ ದಾಖಲಾತಿ ಪ್ರಕ್ರಿಯೆ ಬಗ್ಗೆಯೂ ಏ,20ರ ಬಳಿಕ ನಿರ್ಧರಿಸಲಾಗುವುದು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು