ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ

ಸೋಮವಾರ, ಏಪ್ರಿಲ್ 22, 2019
29 °C

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ

Published:
Updated:

ಬೆಂಗಳೂರು: 2018–19ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಗುರುವಾರ ಆರಂಭವಾಗಲಿದ್ದು, ಬಿಗಿ ಭದ್ರತೆ ನಡುವೆ ಪರೀಕ್ಷೆ ನಡೆಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಿದ್ಧತೆ ಮಾಡಿಕೊಂಡಿದೆ.

2,847 ಪರೀಕ್ಷಾ ಕೇಂದ್ರಗಳಲ್ಲಿ 8,41,666 ವಿದ್ಯಾರ್ಥಿಗಳು ಮೊದಲ ದಿನ ಪ್ರಥಮ ಭಾಷೆಯ ಪರೀಕ್ಷೆ ಬರೆಯಲಿದ್ದಾರೆ. ‌‌ ಬೆಳಿಗ್ಗೆ 9.30ರಿಂದ ಪರೀಕ್ಷೆ ಆರಂಭವಾಗಲಿದೆ ಎಂದು ಮಂಡಳಿ ನಿರ್ದೇಶಕಿ ವಿ. ಸುಮಂಗಲಾ ತಿಳಿಸಿದರು.

ಭದ್ರತೆಗಾಗಿ ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ ಟಿ.ವಿ ಕ್ಯಾಮೆರಾಗಳ ಕಣ್ಗಾವಲು ಇರಿಸಲಾಗಿದೆ. 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ವಿದ್ಯಾರ್ಥಿಗಳು ಸ್ಮಾರ್ಟ್‌ ವಾಚ್‌ ಮತ್ತು ಮೊಬೈಲ್‌ಗಳನ್ನು ಪರೀಕ್ಷಾ ಕೇಂದ್ರಕ್ಕೆ ಒಯ್ಯುವಂತಿಲ್ಲ.  ಕೇಂದ್ರಗಳಲ್ಲಿ ಸ್ಥಾನಿಕ ಜಾಗೃತ ದಳ ಒಳಗೊಂಡಂತೆ ತಾಲ್ಲೂಕು ಮತ್ತು ಜಿಲ್ಲಾ ಹಂತದಲ್ಲೂ ವಿಚಕ್ಷಣಾ ದಳಗಳು ಕಾರ್ಯ ನಿರ್ವಹಿಸಲಿವೆ ಎಂದು ಹೇಳಿದರು. ಏ.10ರಿಂದ ಉತ್ತರ ಪತ್ರಿಕೆಗಳ ಮೌಲ್ಯಮಾಪನ 34 ಶೈಕ್ಷಣಿಕಾ ಜಿಲ್ಲಾ ಕೇಂದ್ರಗಳಲ್ಲಿ ಆರಂಭವಾಗಲಿದೆ ಎಂದರು.

ಉಚಿತ ಪ್ರಯಾಣಕ್ಕೆ ಅವಕಾಶ: ರಿಯಾಯಿತಿ ದರದ ಪಾಸ್ ಹೊಂದಿರುವ  ವಿದ್ಯಾರ್ಥಿಗಳು ಮನೆಯಿಂದ ಪರೀಕ್ಷಾ ಕೇಂದ್ರಗಳಿಗೆ ಬಸ್‌ಗಳಲ್ಲಿ ಉಚಿತವಾಗಿ ತೆರಳಲು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಅವಕಾಶ ಕಲ್ಪಿಸಿವೆ. ಪ್ರವೇಶ ಪತ್ರ ತೋರಿಸಿ ಪ್ರಯಾಣಿಸಬಹುದಾಗಿದೆ ಎಂದು ಎರಡೂ ಸಂಸ್ಥೆಗಳು ಪ್ರಕಟಣೆಯಲ್ಲಿ ತಿಳಿಸಿವೆ.

ಬರಹ ಇಷ್ಟವಾಯಿತೆ?

 • 7

  Happy
 • 1

  Amused
 • 0

  Sad
 • 0

  Frustrated
 • 2

  Angry

Comments:

0 comments

Write the first review for this !