ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುರುವಾರದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ಭರದ ಸಿದ್ಧತೆ

Last Updated 23 ಜೂನ್ 2020, 13:07 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ಲಾಕ್‌ಡೌನ್‌ನಿಂದಾಗಿ ಮುಂದೂಡಲಾಗಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ ಗುರುವಾರದಿಂದ ಆರಂಭವಾಗಲಿದ್ದು, ಕೀಟನಾಶಕಗಳನ್ನು ಸಿಂಪಡಿಸಿ ಪರೀಕ್ಷಾ ಕೊಠಡಿಗಳನ್ನು ಸ್ವಚ್ಛಗೊಳಿಸುವ ಕಾರ್ಯ ಭರದಿಂದ ಸಾಗಿದೆ.

3,209 ಪರೀಕ್ಷಾ ಕೇಂದ್ರಗಳಲ್ಲಿ 8,48,203 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಸುಮಾರು 50,787 ಕೊಠಡಿ ಮೇಲ್ವಿಚಾರಕರ ಸಹಿತ ಸುಮಾರು 1 ಲಕ್ಷ ಮಂದಿ ವಿವಿಧ ಹಂತಗಳಲ್ಲಿ ಪರೀಕ್ಷಾ ಮೇಲ್ವಿಚಾರಣೆ ಹಾಗೂ ವ್ಯವಸ್ಥೆಗೆ ಸಹಕರಿಸಲಿದ್ದಾರೆ.‌

‘ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಪೋಷಕರಿಗೆ 9 ಲಕ್ಷ ಕರಪತ್ರಗಳನ್ನು ವಿತರಿಸಿ, ಪಾಲಿಸಬೇಕಾದ ನಿಯಮಗಳ ಬಗ್ಗೆ ಮನವರಿಕೆ ಮಾಡಲಾಗಿದೆ. 7,115 ಥರ್ಮಲ್‌ ಸ್ಕ್ಯಾನರ್‌ಗಳನ್ನು ಒದಗಿಸಲಾಗಿದೆ. 5,755 ಆರೋಗ್ಯ ತಪಾಸಣಾ ಕೇಂದ್ರಗಳನ್ನು ತೆರೆಯಲಾಗಿದೆ’ ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕಿ ವಿ.ಸುಮಂಗಲಾ ತಿಳಿಸಿದ್ದಾರೆ.

ಎಚ್ಚರಿಕೆ: ದ್ವಿತೀಯ ಪಿಯು ಇಂಗ್ಲಿಷ್‌ ಪರೀಕ್ಷೆಯಲ್ಲಿ ಆಗಿರುವ ಕೆಲವೊಂದು ಅವ್ಯವಸ್ಥೆಯನ್ನು ಗಮನದಲ್ಲಿ ಇಟ್ಟುಕೊಂಡು, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅದಕ್ಕೆ ಅವಕಾಶ ಇಲ್ಲದಂತೆ ನೋಡಿಕೊಳ್ಳಲು ಗಮನ ಹರಿಸಲಾಗಿದೆ. ಎಲ್ಲ ಪರೀಕ್ಷಾ ಕೇಂದ್ರಗಳಳಲ್ಲಿ ಕನಿಷ್ಠ ಇಬ್ಬರು ದೈಹಿಕ ಶಿಕ್ಷಣ ಶಿಕ್ಷಕರು ವಿದ್ಯಾರ್ಥಿಗಳ ನಡುವೆ ಅಂತರ ಇರುವಂತೆ ನೋಡಿಕೊಳ್ಳುವುದು ಸಹಿತ ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಅಗತ್ಯವಿರುವ ಇತರ ಮೇಲ್ವಿಚಾರಣೆ ವಹಿಸಲಿದ್ದಾರೆ.

ಅಂಕಿ ಅಂಶ‌

4,48,560 - ಪರೀಕ್ಷೆ ಬರೆಯಲಿರುವ ಬಾಲಕರು

3,99,643 - ಪರೀಕ್ಷೆ ಬರೆಯಲಿರುವ ಬಾಲಕಿಯರು

3,78,337- ನಗರದ ಪ್ರದೇಶದ ವಿದ್ಯಾರ್ಥಿಗಳು

4,49,866 - ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು

12,674 - ಪರೀಕ್ಷಾ ಕೇಂದ್ರ ಬದಲಿಸಿಕೊಂಡ ವಿದ್ಯಾರ್ಥಿಗಳು

14,699 - ಪರೀಕ್ಷೆಗೆ ನೋಂದಾಯಿಸಿದ ಶಾಲೆಗಳು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT