ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇದೇ 21 ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ

ಬಿಗಿ ಭದ್ರತೆ ಮತ್ತು ವ್ಯಾಪಕ ಸಿದ್ಧತೆ* ಪರಿಶಿಷ್ಟ ವಿದ್ಯಾರ್ಥಿಗಳ ಸಂಖ್ಯೆ ಅಧಿಕ
Last Updated 18 ಮಾರ್ಚ್ 2019, 14:45 IST
ಅಕ್ಷರ ಗಾತ್ರ

ಬೆಂಗಳೂರು: 2019 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಇದೇ 21 ರಿಂದ ನಡೆಯಲಿದೆ. ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಬಿಡುಗಡೆ ಮಾಡಿರುವ ಜಾತಿವಾರು ಮಾಹಿತಿಯ ಪ್ರಕಾರ, ಪರಿಶಿಷ್ಟ ಜಾತಿ ಮತ್ತು ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ.ಪಿ.ಸಿ.ಜಾಫರ್‌ ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.

ಪರಿಶಿಷ್ಟ ಜಾತಿ ಮತ್ತು ವರ್ಗಕ್ಕೆ ಸೇರಿದ 2,27,503 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಪ್ರವರ್ಗ–01 ರಲ್ಲಿ 1,66,533 ವಿದ್ಯಾರ್ಥಿಗಳು, 3ಬಿ ಯಲ್ಲಿ 1,22,949 ವಿದ್ಯಾರ್ಥಿಗಳು, 2 ಬಿ ಯಲ್ಲಿ 1,15,568 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಇತರೆ (ಸಾಮಾನ್ಯ)ವರ್ಗದ 63,355 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಒಟ್ಟು 8,38,088 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಕಳೆದ ಬಾರಿಗಿಂತ 3578 ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳವಾಗಿದೆ. 4651 ಅಂಗವಿಕಲ ಮಕ್ಕಳು ಪರೀಕ್ಷೆಗೆ ನೋಂದಣಿ ಮಾಡಿದ್ದಾರೆ. 1451 ಅಂಗವಿಕಲರಿಗೆ ಭಾಷಾ ವಿನಾಯಿತಿ ನೀಡಲಾಗಿದೆ. 480 ಅರ್ಹ ವಿದ್ಯಾರ್ಥಿಗಳಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳಿಗೆ ಬದಲು ಪರ್ಯಾಯ ವಿಷಯ ಬರೆಯಲು ಅವಕಾಶ ನೀಡಲಾಗಿದೆ ಎಂದು ಜಾಫರ್‌ ವಿವರಿಸಿದರು.

ಹಾಜರಾತಿ ಕೊರತೆಯಿಂದ 10,572 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡುತ್ತಿಲ್ಲ. ಮುಖ್ಯ ಶಿಕ್ಷಕರೇ ವಿದ್ಯಾರ್ಥಿಗಳ ಪ್ರವೇಶ ಪತ್ರವನ್ನು ಹಿಂದಿರುಗಿಸಿದ್ದಾರೆ ಎಂದರು.

ಪರೀಕ್ಷಾ ಕೇಂದ್ರಗಳು ಒಟ್ಟು 2847

ಕ್ಲಸ್ಟರ್‌ರಹಿತ 1057

ಕ್ಲಸ್ಟರ್‌ ಕೇಂದ್ರಗಳು 1698

ಖಾಸಗಿ ಅಭ್ಯರ್ಥಿಗಳ ಪರೀಕ್ಷಾ ಕೇಂದ್ರಗಳ 92

ಸೂಕ್ಷ್ಮ ಪರೀಕ್ಷಾ ಕೇಂದ್ರಗಳು 46

ಅತಿಸೂಕ್ಷ್ಮ ಪರೀಕ್ಷಾ ಕೇಂದ್ರಗಳು 7

(ಕಲಬುರ್ಗಿ ಜಿಲ್ಲೆಯಲ್ಲಿ ಅತಿ ಹೆಚ್ಚು(22) ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಕೇಂದ್ರಗಳಿವೆ)

* ಪರೀಕ್ಷಾ ಸಮಯ ಬೆಳಿಗ್ಗೆ 9.30 ರಿಂದ

ಪರೀಕ್ಷೆ ಮುಖ್ಯಾಂಶಗಳು

* ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಸ್ಥಾನಿಕ ಜಾಗೃತ ದಳವನ್ನೂ ಒಳಗೊಂಡಂತೆ ತಾಲ್ಲೂಕು ಮತ್ತು ಜಿಲ್ಲಾ ಹಂತಗಳಲ್ಲಿ ವಿಚಕ್ಷಣ ದಳಗಳು ಕಾರ್ಯ ನಿರ್ವಹಿಸುತ್ತವೆ.

* ಪ್ರಶ್ನೆ ಪತ್ರಿಕೆಗಳ ಸುರಕ್ಷತೆಗೆ ಪ್ರತಿ ಜಿಲ್ಲಾ ಖಜಾನೆಗಳಲ್ಲಿ ಸಿಸಿಟಿವಿ ಮೂಲಕ ನಿರಂತರ ವೀಕ್ಷಣೆಗೆ ಕ್ರಮ.

* ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳು ಮತ್ತು ಚಟುವಟಿಕೆಗಳನ್ನು ಪೋಸ್ಟರ್‌ ಮೂಲಕ ಪ್ರಚುರ ಪಡಿಸಲಾಗಿದೆ.

* ಪರೀಕ್ಷಾ ಕೊಠಡಿ ಒಳಗೆ ಸ್ಮಾರ್ಟ್‌ ವಾಚ್‌ ಮತ್ತು ಮೊಬೈಲ್‌ಗಳನ್ನು ನಿಷೇಧಿಸಲಾಗಿದೆ.

* ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದ್ದು, ಅಲ್ಲಿ ಯಾವುದೇ ಜೆರಾಕ್ಸ್‌ ಅಂಗಡಿಗಳಿದ್ದರೆ, ಮುಚ್ಚಲು ಕ್ರಮವಹಿಸಲಾಗಿದೆ.

* ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ಏಪ್ರಿಲ್‌ 10 ರಿಂದ ಆರಂಭಿಸಲಾಗುವುದು. 34 ಶೈಕ್ಷಣಿಕ ಜಿಲ್ಲೆಗಳ 230 ಮೌಲ್ಯಮಾಪನ ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಲಿದೆ.

* ಮೌಲ್ಯಮಾಪನದ ಬಳಿಕ ಅಂಕಗಳನ್ನು ಅಂತರ್ಜಾಲ ಆಧಾರಿತ ತಂತ್ರಾಂಶದ ನೆರವಿನೊಂದಿಗೆ ಮೌಲ್ಯಮಾಪನ ಕೇಂದ್ರಗಳಿಂದ ನೇರವಾಗಿ ಮಂಡಳಿ ಸರ್ವರ್‌ಗೆ ವರ್ಗಾಯಿಸಲಾಗುವುದು.

* ಫಲಿತಾಂಶವನ್ನು ವಿದ್ಯಾರ್ಥಿಗಳು/ ಪೋಷಕರ ಮೊಬೈಲ್‌ಗೆ ಎಸ್‌ಎಂಎಸ್ ಮೂಲಕ ನೀಡಲಾಗುವುದು. ಶಾಲಾ ಫಲಿತಾಂಶ ಶಾಲಾ ಲಾಗಿನ್‌ಗೆ ನೀಡಲಾಗುವುದು.

* ಬೆಂಗಳೂರು ನಗರದಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಉಚಿತ ಪ್ರಯಾಣದ ಸೌಲಭ್ಯವಿದೆ.

ವಿದ್ಯಾರ್ಥಿಗಳು, ಪರೀಕ್ಷಾ ಕೇಂದ್ರಗಳು

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು 8,41,666

ಬಾಲಕರು 4,47,864

ಬಾಲಕಿಯರು 3,93,802

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT