ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಟ್ಸ್‌ಆ್ಯಪ್‌ನಲ್ಲಿ ಪ್ರಶ್ನೆಪತ್ರಿಕೆ: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Last Updated 1 ಜುಲೈ 2020, 19:46 IST
ಅಕ್ಷರ ಗಾತ್ರ

ಕಮಲಾಪುರ (ಕಲಬುರ್ಗಿ ಜಿಲ್ಲೆ): ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಎಸ್ಸೆಸ್ಸೆಲ್ಸಿ ಸಮಾಜ ವಿಜ್ಞಾನದ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಯೊಬ್ಬನ ಬಳಿಯಿದ್ದ ಮೊಬೈಲ್‌ನ ವಾಟ್ಸ್‌ಆ್ಯಪ್‌ನಲ್ಲಿ ಪ್ರಶ್ನೆಪತ್ರಿಕೆ ಪತ್ತೆಯಾಗಿದ್ದು, ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆಯ ಕಲಬುರ್ಗಿ ವಲಯದ ಹೆಚ್ಚುವರಿ ಆಯುಕ್ತ ನಲಿನ್ ಅತುಲ್ ಅವರು ವಿದ್ಯಾರ್ಥಿಯ ಜೇಬಿನಲ್ಲಿದ್ದ ಮೊಬೈಲ್‌ನ್ನು ವಶಪಡಿಸಿಕೊಂಡು, ಪರಿಶೀಲಿಸಿದಾಗ ಇದು ಗೊತ್ತಾಯಿತು.

‘ಎಂಡಿಆರ್‌ಎಸ್’ ಎಂಬ ವಾಟ್ಸ್‌ಆ್ಯಪ್‌ ಗ್ರೂಪ್‍ನಲ್ಲಿ ಬುಧವಾರ ಬೆಳಿಗ್ಗೆ 11.51ಕ್ಕೆ 9986013397 ಸಂಖ್ಯೆಯಿಂದ ಈ ಸಂದೇಶ ಬಂದಿದೆ. ಸಂದೇಶ ಡೌನ್‍ಲೋಡ್ ಆಗಿರಲಿಲ್ಲ. ಈ ಸಂಖ್ಯೆ ಹೊಂದಿದ್ದ ವ್ಯಕ್ತಿ ಚಿಂಚೋಳಿ ತಾಲ್ಲೂಕಿನ ಚಿಮ್ಮನಚೋಡ ಗ್ರಾಮದವರು. ಅವರ ವಿರುದ್ಧ ದೂರು ನೀಡಲಾಗಿದೆ. ಪರೀಕ್ಷಾ ಕೊಠಡಿ ಮೇಲ್ವಿಚಾರಕರಿಗೆ ನೋಟಿಸ್ ನೀಡಲಾಗುವುದು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶರಣಬಸಪ್ಪ ಬನ್ನಿಕಟ್ಟಿ ತಿಳಿಸಿದ್ದಾರೆ.

‘ಮೊಬೈಲ್‌ ಪೊಲೀಸರ ವಶಕ್ಕೆ ಒಪ್ಪಿಸಲಾಗಿದ್ದು, ತನಿಖೆಯಿಂದ ಸತ್ಯಾಂಶ ಬೆಳಕಿಗೆ ಬರಲಿದೆ. ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ ಮತ್ತು ವಿದ್ಯಾರ್ಥಿ ಕಡೆಯಿಂದಲೂ ಯಾರಿಗೂ ರವಾನೆಯಾಗಿಲ್ಲ. ಹೀಗಾಗಿ ವಿದ್ಯಾರ್ಥಿಯನ್ನು ಡಿಬಾರ್‌ ಮಾಡದೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಯಿತು. ಪರೀಕ್ಷಾ ಕೇಂದ್ರದೊಳಗೆ ಮೊಬೈಲ್‌ನ್ನು ಒಯ್ಯಲು ಹೇಗೆ ಅವಕಾಶ ನೀಡಲಾಯಿತು ಎಂಬುದರ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಯಿಂದ ವರದಿ ಪಡೆಯಲಾಗುವುದು’ ಎಂದು ನಲಿನ್ ಅತುಲ್ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT