ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವೀಕರಣಗೊಳ್ಳದ ಮಾನ್ಯತೆ: ಎಸ್ಸೆಸ್ಸೆಲ್ಸಿ ಪ್ರವೇಶ ಪತ್ರಕ್ಕೆ ತಡೆ

Last Updated 14 ಫೆಬ್ರುವರಿ 2019, 20:45 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿನ 18 ಖಾಸಗಿ ಹಾಗೂ ಅನುದಾನಿತ ಶಾಲೆಗಳ ಮಾನ್ಯತೆ ನವೀಕರಣ ಆಗದ ಕಾರಣ, ಅಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿರುವ 407 ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರವೇಶ ಪತ್ರ ಇನ್ನೂ ಕೈಸೇರಿಲ್ಲ.

ಶಾಲೆಯಲ್ಲಿನ ಮೂಲಸೌಕರ್ಯಗಳನ್ನು ಪರಿಶೀಲಿಸಿ, ಕನಿಷ್ಠ 1 ವರ್ಷದಿಂದ ಗರಿಷ್ಠ 5 ವರ್ಷಗಳ ವರೆಗೆ ಮಾನ್ಯತೆ ನವೀಕರಣ ಮಾಡುವ ಅಧಿಕಾರ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ(ಡಿಡಿಪಿಐ) ಇದೆ. ಶಾಲೆಗಳ ನಿರ್ಲಕ್ಷ್ಯದಿಂದ ಸಕಾಲಕ್ಕೆ ಮಾನ್ಯತೆ ನವೀಕರಣ ಆಗಿಲ್ಲವಾದ್ದರಿಂದ, ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಈ ಶಾಲೆಯ ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ತಡೆಹಿಡಿದಿದೆ.

‘ಈ ಸಮಸ್ಯೆ ಪ್ರತಿವರ್ಷ ಮರುಕಳಿಸುತ್ತದೆ. ಡಿಡಿಪಿಐಗಳು ಮಾನ್ಯತೆ ನವೀಕರಿಸಿದ ಬಳಿಕ, ಪ್ರವೇಶ ಪತ್ರಗಳನ್ನು ರವಾನಿಸುತ್ತೇವೆ. ಪರೀಕ್ಷೆಗೆ ಒಂದು ವಾರ ಇರುವಾಗಲೇ ಇಂತಹ ಎಲ್ಲ ಸಮಸ್ಯೆಗಳು ಪರಿಹಾರ ಆಗಲಿವೆ’ ಎಂದುಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕಿ ವಿ.ಸುಮಂಗಲ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ಅಂಕಿ–ಅಂಶ

8,41,649

ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ನೋಂದಾಯಿಸಿದ ವಿದ್ಯಾರ್ಥಿಗಳು

2,847

ಪರೀಕ್ಷಾ ಕೇಂದ್ರಗಳು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT