ಮಂಗಳವಾರ, ಮೇ 26, 2020
27 °C
ವದಂತಿಗಳಿಗೆ ಕಿವಿಗೊಡಬೇಡಿ: ಸಚಿವ ಸುರೇಶ್‌ಕುಮಾರ್

ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ನಿಗದಿಯಾಗಿಲ್ಲ; ಸಚಿವ ಎಸ್. ಸುರೇಶ್ ಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ‘ದ್ವಿತೀಯ ಪಿಯುಸಿ ಇಂಗ್ಲಿಷ್‌ ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆ ದಿನ ನಿಗದಿಪಡಿಸಿಲ್ಲ. ವಿದ್ಯಾರ್ಥಿಗಳು, ಪೋಷಕರು ವದಂತಿಗಳಿಗೆ ಕಿವಿಗೊಡಬಾರದು’ ಎಂದು ಶಿಕ್ಷಣ ಸಚಿವ ಎಸ್‌. ಸುರೇಶ್ ಕುಮಾರ್‌ ತಿಳಿಸಿದ್ದಾರೆ.

ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಫೇಸ್‌ಬುಕ್‌ ಲೈವ್‌ನಲ್ಲಿ ಮಾತನಾಡಿದ ಅವರು, ‘ಏ. 24ರಂದು ಪಿಯುಸಿ ಇಂಗ್ಲಿಷ್‌ ಪರೀಕ್ಷೆ ನಡೆಯಲಿದೆ ಎಂದು ವಾಟ್ಸ್‌ಆ್ಯಪ್‌ ಮೂಲಕ ಹರಿದಾಡುತ್ತಿರುವ ಸುದ್ದಿ ಸುಳ್ಳು’ ಎಂದು ಸ್ಪಷ್ಟಪಡಿಸಿದರು. ‘ಲಾಕ್‌ಡೌನ್‌ ತೆರವುಗೊಳಿಸಿ, ಜನಜೀವನ ಸಹಜ ಸ್ಥಿತಿಗೆ  ಬಂದ ನಂತರ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗುವುದು’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು