ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಲ್‌ ದಿ ಬೆಸ್ಟ್‌: ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ

Last Updated 29 ಏಪ್ರಿಲ್ 2019, 19:07 IST
ಅಕ್ಷರ ಗಾತ್ರ

ಬೆಂಗಳೂರು:2019ನೇ ಸಾಲಿನ ಎಸ್‌ಎಸ್‌ಎಲ್‌ಸಿಪರೀಕ್ಷೆ ಫಲಿತಾಂಶಏಪ್ರಿಲ್‌ 30ಕ್ಕೆ ಪ್ರಕಟಗೊಳ್ಳಲಿದೆ.

‘ಏಪ್ರಿಲ್ 30ರ ಮಧ್ಯಾಹ್ನ 12ಕ್ಕೆ ಪತ್ರಿಕಾಗೋಷ್ಠಿಯಲ್ಲಿಫಲಿತಾಂಶ ಪ್ರಕಟಿಸಲಾಗುವುದು. ನಂತರಪ್ರೌಢಶಿಕ್ಷಣ ಮಂಡಳಿ ವೆಬ್ ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ’ ಎಂದುಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಪ್ರಧಾನ ಕಾರ್ಯದರ್ಶಿ ಎಸ್‌.ಆರ್‌. ಉಮಾಶಂಕರ್‌ ಎಂದು ಪ್ರಜಾವಾಣಿಗೆ ತಿಳಿಸಿದರು.

ಕಳೆದ ಬಾರಿಯಂತೆಯೇ ಈ ಬಾರಿಯೂ ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳಿಗೂ ಎಸ್‌ಎಂಎಸ್‌ ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ ಎಂದರು.

ಫಲಿತಾಂಶವನ್ನುwww.karresults.nic.in, www.kaceb.kar.nic.inವೆಬ್‌ಸೈಟ್‌ನಲ್ಲೂ ನೋಡಬಹುದು.ಮೇ 1 ರಂದು ಶಾಲೆಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ.

ಈ ಬಾರಿ2,847 ಪರೀಕ್ಷಾ ಕೇಂದ್ರಗಳಲ್ಲಿ 8,41,666 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಹಾಜರಾತಿ ಕೊರತೆಯಿಂದ ಈ ಬಾರಿ 10,572 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಸಾಧ್ಯವಾಗಿಲ್ಲ.

‘ಫಲಿತಾಂಶ ಸಿದ್ಧವಿದ್ದು, ಯಾವುದೇ ಕ್ಷಣದಲ್ಲೂಪ್ರಕಟಿಸಬಹುದು ಎಂದಷ್ಟೇ ಹೇಳಿದ್ದೇನೆ. ಮೇ 2ಕ್ಕೆ ಫಲಿತಾಂಶ ಪ್ರಕಟಿಸುತ್ತೇವೆ ಎಂದು ಯಾರಿಗೂ ತಿಳಿಸಿಲ್ಲ’ ಎಂದು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿವಿ. ಸುಮಂಗಲಾ‘ಪ್ರಜಾವಾಣಿ’ಗೆ ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT