ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಫಲಿತಾಂಶ:ವಿದ್ಯಾರ್ಥಿಗಳ ಪರಿಶ್ರಮ,ಶಿಕ್ಷಕರ ಮಾರ್ಗದರ್ಶನದ ಫಲ–ಸಿಎಂ

Last Updated 3 ಮೇ 2019, 0:30 IST
ಅಕ್ಷರ ಗಾತ್ರ

ಬೆಂಗಳೂರು:ಎಸ್ಸೆಸ್ಸೆಲ್ಸಿಪರೀಕ್ಷೆಯಲ್ಲಿ ಹಾಸನ ಹಾಗೂ ರಾಮನಗರರಾಜ್ಯದಲ್ಲಿಮೊದಲ ಎರಡು ಸ್ಥಾನ ಪಡೆಯಲು ಶಿಕ್ಷಣ ಇಲಾಖೆಯ ಸುಧಾರಣಾ ಕ್ರಮಗಳೊಂದಿಗೆ ವಿದ್ಯಾರ್ಥಿಗಳ ಪರಿಶ್ರಮ, ಶಿಕ್ಷಕರು, ಪೋಷಕರ ಮಾರ್ಗದರ್ಶನವೂ ಕಾರಣ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.

‘ಹಾಸನ ಮತ್ತು ರಾಮನಗರ ಜಿಲ್ಲೆಗಳು ಅತ್ಯುತ್ತಮ ಫಲಿತಾಂಶ ದಾಖಲಿಸಿರುವ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ.ಶಿಕ್ಷಣ ಇಲಾಖೆಯಪರಿಹಾರ ಬೋಧನೆಯ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿದ್ದು ಉತ್ತಮ ಫಲಿತಾಂಶಪ್ರಮುಖ ಕಾರಣವಾಗಿದೆ.ಪ್ರತಿ ಶಾಲೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಗಮನಿಸಿ, ಅವರಿಗೆ ವಿಶೇಷ ತರಗತಿಗಳನ್ನು ನಡೆಸಲಾಗಿದೆ. ವಿದ್ಯಾರ್ಥಿಗಳು ಶ್ರದ್ಧೆಯಿಂದ ಕಲಿಯುವುದರೊಂದಿಗೆ ಪೋಷಕರೂ ತಮ್ಮ ಮಕ್ಕಳು ಅತ್ಯುತ್ತಮ ಅಂಕ ಗಳಿಸಬೇಕೆಂದು ಅವರಿಗೆ ಒತ್ತಾಸೆಯಾಗಿದ್ದು, ಉತ್ತಮ ಫಲಿತಾಂಶಕ್ಕೆ ಬಂದಿದೆ’ ಎಂದು ಸಿಎಂ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಈ ಬಾರಿ ಬಹುತೇಕ ಜಿಲ್ಲೆಗಳಲ್ಲಿ ಫಲಿತಾಂಶದಲ್ಲಿ ಸುಧಾರಣೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆ 7ನೇ ಸ್ಥಾನಕ್ಕೆ ಕುಸಿದಿದೆ ಎಂದು ವಿಷಾದಿಸಬೇಕಾಗಿಲ್ಲ, ಏಕೆಂದರೆ ಕಳೆದ ವರ್ಷಕ್ಕಿಂತ ಉತ್ತಮ ಫಲಿತಾಂಶ ಇಲ್ಲಿ ದಾಖಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಬಹುತೇಕ ಜಿಲ್ಲೆಗಳ ಶೇಕಡಾವಾರು ಫಲಿತಾಂಶದಲ್ಲಿ ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ವರ್ಷಗಳಲ್ಲಿ ಸರ್ಕಾರಿ ಶಾಲೆಗಳು ಇನ್ನಷ್ಟು ಉತ್ತಮ ಸಾಧನೆ ತೋರುವ ವಿಶ್ವಾಸವಿದೆ ಎಂದಿದ್ದಾರೆ.

ಶಾಲೆಯ ಶೇಕಡಾವಾರು ಫಲಿತಾಂಶವಷ್ಟೇ ಅಲ್ಲ, ಕಲಿಕೆಯ ಗುಣಮಟ್ಟವೂ ಅತಿ ಮುಖ್ಯ. ಕಲಿಕೆಯ ಗುಣಮಟ್ಟ ಸುಧಾರಣೆಗೂ ಶಿಕ್ಷಣ ಇಲಾಖೆ ಹಾಗೂ ಶಾಲಾ ಶಿಕ್ಷಕರು ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT