ದಾವಣಗೆರೆ: ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣ ಹೆಚ್ಚಿಸಲು ಆಗ್ರಹಿಸಿ ಜೂನ್ 9ರಂದು ಬೆಂಗಳೂರಿಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಹರಿಹರ ತಾಲ್ಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷ ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿದರು.

ಶುಕ್ರವಾರ ಇಲ್ಲಿನ ವಾಲ್ಮೀಕಿ ಸಾಂಸ್ಕೃತಿಕ ಸಮುದಾಯ ಭವನದಲ್ಲಿ ನಡೆದ ಸಮಾಜದ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರ ಎಸ್ಟಿಗೆ ಔದ್ಯೋಗಿಕ, ಶೈಕ್ಷಣಿಕ, ರಾಜಕೀಯ ಮತ್ತು ಆರ್ಥಿಕವಾಗಿ ಶೇ 7ರಷ್ಟು ಮೀಸಲಾತಿ ನೀಡಿದೆ. ಆದರೆ ರಾಜ್ಯ ಸರ್ಕಾರ ಈ ಮೀಸಲಾತಿ ಪ್ರಮಾಣ ಹೆಚ್ಚಿಸುವಲ್ಲಿ ಮೀನಮೇಷ ಎಣಿಸುತ್ತಿದೆ. ಈಗಿರುವ ಶೇ 3ರ ಮೀಸಲಾತಿಯನ್ನು ಶೇ 7ಕ್ಕೆ ಹೆಚ್ಚಿಸುವುದೂ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಜೂನ್ 9ರಂದು ರಾಜನಹಳ್ಳಿ ಪೀಠದಿಂದ ಪಾದಯಾತ್ರೆ ಆರಂಭವಾಗಲಿದೆ. 24ರಂದು ಬೆಂಗಳೂರಿನ ವಿಧಾನಸೌಧದ ಬಳಿಯಿರುವ ವಾಲ್ಮೀಕಿ ಪ್ರತಿಮೆ ಎದುರು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು. ಮೊದಲ ಹಂತವಾಗಿ ಜೂನ್ 6ರಂದು ರಾಜ್ಯದ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ವಾಲ್ಮೀಕಿ ನಾಯಕ ಸಮಾಜದಿಂದ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.