ಎಸ್ಟಿಗೆ ಪ್ರತ್ಯೇಕ ಸಚಿವಾಲಯ: ಬಿ.ಎಸ್. ಯಡಿಯೂರಪ್ಪ

ಬೆಂಗಳೂರು: ಪರಿಶಿಷ್ಟ ಪಂಗಡಕ್ಕೆ ಸೇರಿದ ಸಮುದಾಯವರ ಹಿತ ಕಾಯಲು ಮುಂದಾಗಿರುವ ರಾಜ್ಯ ಸರ್ಕಾರ, ಇದಕ್ಕಾಗಿ ಪ್ರತ್ಯೇಕ ಸಚಿವಾಲಯ ಆರಂಭಿಸಲು ನಿರ್ಧರಿಸಿದೆ.
ಈ ಕುರಿತು ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ‘ಪರಿಶಿಷ್ಟ ಪಂಗಡದವರ ಶ್ರೇಯೋಭಿವೃದ್ಧಿಗಾಗಿ ಪ್ರತ್ಯೇಕ ಸಚಿವಾಲಯ ಆರಂಭಿಸುವ ಬಗ್ಗೆ ಮುಂದಿನ ತಿಂಗಳು ಮಂಡಿಸಲಿರುವ ಬಜೆಟ್ನಲ್ಲಿ ಘೋಷಣೆ ಮಾಡಬೇಕಾಗಿದೆ. ಈ ಪ್ರಸ್ತಾವನೆಯನ್ನು ಬಜೆಟ್ನಲ್ಲಿ ಸೇರಿಸಲು ಸೂಕ್ತ ಕ್ರಮಕೈಗೊಳ್ಳಿ’ ಎಂದು ನಿರ್ದೇಶನ ನೀಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.