ಸೋಮವಾರ, ಜನವರಿ 27, 2020
26 °C

ಮಾ.5ಕ್ಕೆ ಪೂರ್ಣ ಪ್ರಮಾಣದ ಬಜೆಟ್‌: ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

BS Yediyurappa

ಶಿಕಾರಿಪುರ/ದಾವಣಗೆರೆ: ಮಾ.5ರಂದು ಪೂರ್ಣ ಪ್ರಮಾಣದ ಬಜೆಟ್‌ ಮಂಡಿಸುತ್ತೇನೆ. ಬಜೆಟ್‌ ಮಂಡನೆ ಪೂರ್ವ ಸಿದ್ಧತೆ ನಡೆಯುತ್ತಿದ್ದು, ರೈತರಿಗೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತೇನೆ’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು.

ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಹರಡುತ್ತಿರುವ ಮಂಗನ ಕಾಯಿಲೆ ನಿಯಂತ್ರಣಕ್ಕಾಗಿ ಕೆಎಫ್‌ಡಿ ಲ್ಯಾಬ್‌ ತೆರೆಯಲು ಕ್ರಮ ಕೈಗೊಳ್ಳಲಾಗುವುದು. ಮಂಗನ ಕಾಯಿಲೆಯಿಂದ ಮೃತಪಟ್ಟವರಿಗೆ ಶೀಘ್ರವೇ ಪರಿಹಾರ ಹಣ ಬಿಡುಗಡೆ ಮಾಡಲಾಗುವುದು’ ಎಂದು ಭರವಸೆ ನೀಡಿದರು.

ದಾವಣಗೆರೆಯಲ್ಲಿ ಮಾತನಾಡಿದ ಯಡಿಯೂರಪ್ಪ ‘ನಾನು ಒಬ್ಬ ರೈತನ ಮಗನಾಗಿ, ಸಹಜವಾಗಿ ಕೃಷಿಗೆ ಆದ್ಯತೆ ಕೊಡುತ್ತೇನೆ. ರೈತಪರ ಬಜೆಟ್ ಮಂಡಿಸುತ್ತೇನೆ. ಹಣಕಾಸಿನ ಪರಿಸ್ಥಿತಿ ನೋಡಿಕೊಂಡು ಏನು ಮಾಡಲು ಸಾಧ್ಯವೋ ಅದನ್ನು ಮಾಡುತ್ತೇನೆ, ರೈತರಿಗೆ ಪ್ರತ್ಯೇಕ ಬಜೆಟ್ ಮಂಡಿಸುವ ಬಗ್ಗೆ ನಿರ್ಧಾರ ಮಾಡಿಲ್ಲ’ ಎಂದು ಹೇಳಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು