ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರಾಜ್ಯ ಸರ್ಕಾರಕ್ಕೆ ಬುದ್ಧಿಯೇ ಇಲ್ಲ’; ಹೈಕೋರ್ಟ್‌

Last Updated 29 ಅಕ್ಟೋಬರ್ 2018, 20:00 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯ ಸರ್ಕಾರಕ್ಕೆ ಬುದ್ಧಿಯೇ ಇಲ್ಲ, ಇದಕ್ಕೆ ಸರಿಯಾಗಿ ಮಾರ್ಗದರ್ಶನ ಮಾಡುವವರೇ ಇಲ್ಲ’ ಎಂದು ಹೈಕೋರ್ಟ್ ಕಿಡಿ
ಕಾರಿದೆ.

ಪಶು ವೈದ್ಯರನ್ನು ತಾಲ್ಲೂಕು ಪಂಚಾಯ್ತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ (ಇ.ಒ) ಆಗಿ ನಿಯೋಜನೆ ಮಾಡಿದ ಸರ್ಕಾರದ ನಡೆಗೆ ಬೇಸರ ವ್ಯಕ್ತಪಡಿಸಿದ ನ್ಯಾಯಮೂರ್ತಿ ಎಚ್‌.ಜಿ.ರಮೇಶ್‌ ಹಾಗೂ ಎಸ್‌.ಸುನಿಲ್‌ ದತ್ ಯಾದವ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ವೇಳೆ ಬೇಸರ ವ್ಯಕ್ತಪಡಿಸಿತು.

‘ಗ್ರಾಮೀಣ ಪ್ರದೇಶದಲ್ಲಿ ಪಶು ವೈದ್ಯರ ಕೊರತೆ ಇದೆ. ಆದರೆ, ಸರ್ಕಾರ ಇವರನ್ನು ಆಡಳಿತಾತ್ಮಕ ಕೆಲಸಕ್ಕೆ ಬಳಸಿಕೊಳ್ಳುತ್ತಿರುವುದು ಸರಿಯೇ’ ಎಂದು ಪ್ರಶ್ನಿಸಿದ ನ್ಯಾಯಪೀಠ, ‘ಯಾವ ಅಧಿಕಾರಿಗಳನ್ನು ಹೇಗೆ ಕೆಲಸ ಮಾಡಿಸಿಕೊಳ್ಳಬೇಕೆಂಬುದೇ ಗೊತ್ತಿಲ್ಲ’ ಎಂದು ಹೇಳಿತು.

ಅರ್ಜಿದಾರರು ಸರ್ಕಾರಕ್ಕೆ ಮನವಿ ಸಲ್ಲಿಸುವಂತೆ ಸೂಚಿಸಿ ಅರ್ಜಿ ವಜಾ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT