ಶುಕ್ರವಾರ, ಆಗಸ್ಟ್ 6, 2021
22 °C

ಆರ್‌ಟಿಇ: ₹275 ಕೋಟಿ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಹಕ್ಕು ಕಾಯ್ದೆಯಡಿಯಲ್ಲಿ (ಆರ್‌ಟಿಇ) ದಾಖಲಾದ ವಿದ್ಯಾರ್ಥಿಗಳ ಶುಲ್ಕ ಮರುಪಾವತಿಗಾಗಿ ಸರ್ಕಾರ ₹ 275 ಕೋಟಿ ಬಿಡುಗಡೆ ಮಾಡಿದೆ.

‘ಪ್ರಸಕ್ತ ಸಾಲಿಗೆ ₹ 550 ಕೋಟಿ ನಿಗದಿಯಾಗಿದೆ. ಖಾಸಗಿ ಶಾಲೆಗಳ ಸದ್ಯದ ಸಂಕಷ್ಟದ ಪರಿಸ್ಥಿತಿಯನ್ನು ಗಮನಿಸಿ ಶೇ 50ರಷ್ಟು ಶುಲ್ಕವನ್ನು ಇದೀಗ ಬಿಡುಗಡೆ ಮಾಡಲಾಗಿದೆ. ಖಾಸಗಿ ಶಾಲೆಗಳು ಸರ್ಕಾರದ ಜತೆಗೆ ಸೇರಿ ವಿದ್ಯಾರ್ಥಿಗಳ ಹಿತ ಕಾಪಾಡಲು ಸಹಕರಿಸಬೇಕು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.‌

ಈ ಮಧ್ಯೆ, ಅನುದಾನಿತ ಪದವಿಪೂರ್ವ ಕಾಲೇಜುಗಳ ಮೇ, ಜೂನ್‌, ಜುಲೈ ತಿಂಗಳ ವೇತನ ಅನುದಾನಕ್ಕಾಗಿ ₹ 143.37 ಕೋಟಿ ಬಿಡುಗಡೆ ಮಾಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು