ಭಾನುವಾರ, ಸೆಪ್ಟೆಂಬರ್ 26, 2021
28 °C
‘ನಾನು ಆಕಾಂಕ್ಷಿಯಲ್ಲ’ ಎಂದ ಸಂಸದೆ

ಬಿಜೆಪಿ ಅಧ್ಯಕ್ಷರ ಬದಲಾವಣೆ ಸಾಧ್ಯತೆ: ಶೋಭಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ನಮ್ಮ‌ ಸಂಘಟನೆಯಲ್ಲಿ (ಬಿಜೆಪಿ) ನಿರಂತರವಾಗಿ ಬದಲಾವಣೆ ನಡೆಯುತ್ತದೆ. ಹೀಗಾಗಿ, ಮುಂದಿನ ದಿನಗಳಲ್ಲಿ ರಾಜ್ಯ ಘಟಕದಲ್ಲಿ ಬದಲಾವಣೆ ಆಗಬಹುದು’ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. 

ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ರಾಜ್ಯ ಘಟಕದ ಅಧ್ಯಕ್ಷರಾಗಿ ಬಿ.ಎಸ್‌.ಯಡಿಯೂರಪ್ಪ ಅವರು ಮೂರು ವರ್ಷಗಳ ಹಿಂದೆ ನೇಮಕವಾಗಿದ್ದರು. ಈಗ ವಿರೋಧ ಪಕ್ಷದ ನಾಯಕರೂ ಆಗಿದ್ದಾರೆ. ಅಧ್ಯಕ್ಷರ ಬದಲಾವಣೆ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ತೀರ್ಮಾನ ಮಾಡುತ್ತಾರೆ ’ ಎಂದರು.

‘ನಾನು ಈಗ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದೇನೆ. ಲೋಕಸಭಾ ಚುನಾವಣೆಯಲ್ಲಿ ಮತ್ತೆ ಗೆದ್ದು ಬರುತ್ತೇನೆ. ನಾನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ ’ ಎಂದು ಹೇಳಿದರು.

ಲೋಕಸಭಾ ಚುನಾವಣೆಯ ಬಳಿಕ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರ ಬದಲಾಯಿಸುವ ಬಗ್ಗೆ ರಾಷ್ಟ್ರೀಯ ನಾಯಕರು ಇತ್ತೀಚೆಗೆ ಸುಳಿವು ನೀಡಿದ್ದಾರೆ. ಪಕ್ಷದ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌, ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಅರವಿಂದ ಲಿಂಬಾವಳಿ, ಸಿ.ಟಿ. ರವಿ ಹಾಗೂ ಹಿರಿಯ ಶಾಸಕ ಆರ್‌. ಅಶೋಕ್‌ ಅವರು ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು