ಮೈತ್ರಿ ಸರ್ಕಾರ ಐದು ವರ್ಷ ಪೂರೈಸಲಿದೆ: ಕೆ.ಸಿ.ವೇಣುಗೋಪಾಲ್‌ ವಿಶ್ವಾಸ

ಶನಿವಾರ, ಮೇ 25, 2019
32 °C

ಮೈತ್ರಿ ಸರ್ಕಾರ ಐದು ವರ್ಷ ಪೂರೈಸಲಿದೆ: ಕೆ.ಸಿ.ವೇಣುಗೋಪಾಲ್‌ ವಿಶ್ವಾಸ

Published:
Updated:

ಕಲಬುರ್ಗಿ: ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಉರುಳಿಸುವ ಕುರಿತು ಬಿಜೆಪಿ ನಾಯಕರು ಕನಸು ಕಾಣಲಿ. ನಾವು ಅವರನ್ನು ತಡೆಯುವುದಿಲ್ಲ. ಆದರೆ, ಸಮ್ಮಿಶ್ರ ಸರ್ಕಾರವು ಐದು ವರ್ಷದ ಅವಧಿಯನ್ನು ನಿಸ್ಸಂಶಯವಾಗಿ ಪೂರೈಸಲಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ವಿಶ್ವಾಸ ವ್ಯಕ್ತಪಡಿಸಿದರು.

ಚಿಂಚೋಳಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೂ ಸಮ್ಮಿಶ್ರ ಸರ್ಕಾರ ಬೀಳುವುದು ಖಚಿತ ಎಂದು ಬಿಜೆಪಿಯವರು ಹೇಳುತ್ತಲೇ ಇದ್ದಾರೆ. ಆದರೆ ಸರ್ಕಾರವು ಈಗಾಗಲೇ ಒಂದು ವರ್ಷ ಪೂರೈಸಿದೆ’ ಎಂದರು.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಸಚಿವರಾದ ಪ್ರಿಯಾಂಕ್ ಖರ್ಗೆ, ರಾಜಶೇಖರ ಪಾಟೀಲ, ರಹೀಂ ಖಾನ್, ಅಭ್ಯರ್ಥಿ ಸುಭಾಷ ರಾಠೋಡ ಇದ್ದರು. 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 4

  Angry

Comments:

0 comments

Write the first review for this !