ಚುನಾವಣೋತ್ತರ ಸಮೀಕ್ಷೆಗಳು ವಾಸ್ತವಕ್ಕೆ ದೂರವಾಗಿವೆ: ದಿನೇಶ್ ಗುಂಡೂರಾವ್ 

ಬುಧವಾರ, ಜೂನ್ 19, 2019
23 °C

ಚುನಾವಣೋತ್ತರ ಸಮೀಕ್ಷೆಗಳು ವಾಸ್ತವಕ್ಕೆ ದೂರವಾಗಿವೆ: ದಿನೇಶ್ ಗುಂಡೂರಾವ್ 

Published:
Updated:

ಬೆಂಗಳೂರು: ಲೋಕಸಭಾ ಚುನಾವಣೆ ಫಲಿತಾಂಶ ಕುರಿತು ಪ್ರಕಟಗೊಂಡಿರುವ ಚುನಾವಣೋತ್ತರ ಸಮೀಕ್ಷೆಗಳು ವಾಸ್ತವಕ್ಕೆ ದೂರ‌ವಾಗಿವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಧಾನಿ ಮೋದಿಯವರು ಅಭಿವೃದ್ಧಿ ಪರ ಆಡಳಿತ ನಡೆಸಲಿಲ್ಲ. ಅವರು ಪ್ರಚಾರದಲ್ಲೇ ಆಡಳಿತ ಮಾಡಿದ್ದಾರೆ. ಸಾಕಷ್ಟು ಸಮಸ್ಯೆಗಳಿದರೂ ಅವರಿಗೆ ಇಷ್ಟೊಂದು ಅಂಕಿ ಸಂಖ್ಯೆ ತೋರಿಸಿರುವುದು ಆಶ್ಚರ್ಯ ಮೂಡಿಸಿದೆ’ ಎಂದರು. 

ಇತ್ತೀಚಿಗೆ ಆಸ್ಟ್ರೇಲಿಯದಲ್ಲೂ ಯಾವುದೇ ಎಕ್ಸಿಟ್ ಪೋಲ್ ಸಮೀಕ್ಷೆಗಳು ನಿಜ ಹೇಳಲಿಲ್ಲ. ಚುನಾವಣೋತ್ತರ ಸಮೀಕ್ಷೆಗಳು ತಪ್ಪು ಅಥವಾ ಸುಳ್ಳು ಅಂತ ಹೇಳಲ್ಲ. ಕರ್ನಾಟಕದಲ್ಲಿ ಈ ಸಮೀಕ್ಷೆಗಳು ತೋರಿಸಿರುವುದಕ್ಕಿಂತ ಹೆಚ್ಚು ಸ್ಥಾನಗಳನ್ನು ನಾವು ಪಡೆಯುತ್ತೇವೆ. ಈ ಸಮೀಕ್ಷೆಗಳನ್ನು ನಾನು‌ ನಂಬುವುದಿಲ್ಲ ಎಂದರು.

ಮೇ.23ರ ತನಕ‌ ಕಾದು ನೋಡೋಣ. ಅಂದು ನಿಜವಾದ ಸಮೀಕ್ಷೆ ಬರುತ್ತದೆ. ನಮಗೆ ರಾಜ್ಯ, ದೇಶದಲ್ಲಿ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸ ಇದೆ ಎಂದು ತಿಳಿಸಿದರು. 

'ಎಕ್ಸಿಟ್ ಪೋಲ್ ನಾಟ್ ಎ ಎಕ್ಸಾಟ್ ಪೋಲ್'. ಮೂಡ್ ಸೆಟ್ ಮಾಡಿ, ಇವಿಎಂಗಳನ್ನು ತಿರುಚುವ ಹುನ್ನಾರ ಇದಾಗಿದೆ. ಚಂದ್ರಬಾಬು ನಾಯ್ಡು ಸಹ ಇದನ್ನೇ ಪದೇ ಪದೇ ಹೇಳುತ್ತಲೇ ಇದ್ದಾರೆ. ಚಾನಲ್‌ಗಳಲ್ಲಿ ಮೋದಿ ಅಲೆ ಇದೆ. ಮೇ.23ರ ಬಳಿಕ ಸ್ಪಷ್ಟ ಚಿತ್ರಣ ಹೊರ ಬೀಳಲಿದೆ’ ಎಂದು ರಾಜ್ಯಸಭಾ ಸದಸ್ಯ ಕಾಂಗ್ರೆಸ್ಸಿನ  ಬಿ.ಕೆ ಹರಿಪ್ರಸಾದ್ ಹೇಳಿದರು. 

ಡಿಕೆಶಿ ವಿದೇಶ ಪ್ರವಾಸ: ಕುಟುಂಬ ಸದಸ್ಯರ ಜೊತೆ ಸಚಿವ ಡಿ.ಕೆ.ಶಿವಕುಮಾರ್‌ ಒಂದು ವಾರ ಕಾಲ ಆಸ್ಟ್ರೇಲಿಯಾಕ್ಕೆ ಪ್ರವಾಸ ಕೈಗೊಂಡಿದ್ದಾರೆ. 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 17

  Happy
 • 1

  Amused
 • 0

  Sad
 • 0

  Frustrated
 • 4

  Angry

Comments:

0 comments

Write the first review for this !