ಕಾಂಗ್ರೆಸ್‌ ಬಗ್ಗೆ ರೋಷನ್‌ ಬೇಗ್ ಬಹಿರಂಗ ಹೇಳಿಕೆ ಸರಿಯಲ್ಲ: ಯು.ಟಿ.ಖಾದರ್‌

ಸೋಮವಾರ, ಜೂನ್ 17, 2019
28 °C

ಕಾಂಗ್ರೆಸ್‌ ಬಗ್ಗೆ ರೋಷನ್‌ ಬೇಗ್ ಬಹಿರಂಗ ಹೇಳಿಕೆ ಸರಿಯಲ್ಲ: ಯು.ಟಿ.ಖಾದರ್‌

Published:
Updated:

ನವದೆಹಲಿ: ‘ಕಾಂಗ್ರೆಸ್ ಹಿರಿಯ ಮುಖಂಡ ರೋಷನ್ ಬೇಗ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸಚಿವ ಯು.ಟಿ. ಖಾದರ್, ಪಕ್ಷದ ಮುಖಂಡರ ಕುರಿತು ಬಹಿರಂಗ ಹೇಳಿಕೆ‌ ನೀಡುವುದು ಸರಿಯಲ್ಲ’ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇಲ್ಲಿನ ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಶ್ರಮಿಸಿದೆ’ ಎಂದರು.

ಇದನ್ನೂ ಓದಿ... ‘ವೇಣುಗೋಪಾಲ್‌ ಒಬ್ಬ ಬಫೂನ್, ಸಿದ್ದು ಅಹಂಕಾರಿ, ದಿನೇಶ್ ಫ್ಲಾಪ್‌ ಅಧ್ಯಕ್ಷ’

ಲೋಕಸಭೆ ಚುನಾವಣೆಯ ಸೀಟು ಹಂಚಿಕೆಯಲ್ಲೂ ಕಾಂಗ್ರೆಸ್‌ನಿಂದ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿಲ್ಲ. ಕೇವಲ ಒಂದು ಕ್ಷೇತ್ರ ನೀಡುವುದಾಗಿ ಅಲ್ಪ ಸಂಖ್ಯಾತ ಮುಖಂಡರ ಸಲಹೆಯ ಮೇರೆಗೆ ಕಾಂಗ್ರೆಸ್ ನಿರ್ಧರಿಸಿತ್ತು. ಆದರೂ ಪಕ್ಷದ ಮುಖಂಡರನ್ನು ದೂಷಿಸುವುದು ಸರಿಯಲ್ಲ ಎಂದು ಖಾದರ್ ತಿಳಿಸಿದರು.

ದಿನೇಶ್ ಗುಂಡೂರಾವ್ ಉತ್ತಮ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಎಲ್ಲ ಜಾತಿ- ಜನರ ನಾಯಕರೂ ಹೌದು ಎಂದು ಅವರು ಒತ್ತಿ ಹೇಳಿದರು.

ರೋಷನ್ ಬೇಗ್‌ ಹಿರಿಯ ರಾಜಕಾರಣಿ. ಹಿರಿಯ ಮುಖಂಡರ ಕುರಿತು ಹೀಗೆ ಮಾತನಾಡುವುದು ಸರಿಯಲ್ಲ. ಅವರ ಹೇಳಿಕೆ  ಕುರಿತು ಪಕ್ಷ ವು ಆಂತರಿಕ ಚರ್ಚೆ ನಡೆಸಲಿದೆ ಎಂದು ವಿವರಿಸಿದರು.

ಬೇಗ್ ವೈಯಕ್ತಿಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅದು ಬದಲಾಗಲೂಬಹುದು. ಆದರೂ ಅವರ ಹೇಳಿಕೆಯಿಂದ ಪಕ್ಷಕ್ಕೆ ಮುಜುಗರ ಆಗಿದೆ. ಬೇಗ್ ಅವರಿಗೆ ಬಿಜೆಪಿ ಮಾನಸಿಕ‌ ಕಿರುಕುಳ ನೀಡಿದಾಗ ಕಾಂಗ್ರೆಸ್ ರಕ್ಷಿಸಿದೆ. ಅದನ್ನು ಮರೆತು ಬಿಜೆಪಿ ಹೊಗಳುವುದು ಸೂಕ್ತವಲ್ಲ. ಇದನ್ನೆಲ್ಲ ನೆನಪಿಟ್ಟುಕೊಂಡಿರುವ ಅವರು  ಆಪರೇಷನ್ ಕಮಲಕ್ಕೆ ಒಳಗಾಗುವುದಿಲ್ಲ ಎಂಬ ನಂಬಿಕೆ ಇದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 7

  Happy
 • 0

  Amused
 • 2

  Sad
 • 0

  Frustrated
 • 1

  Angry

Comments:

0 comments

Write the first review for this !