ಶನಿವಾರ, ಆಗಸ್ಟ್ 24, 2019
23 °C

‘ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಸಮರ್ಥರು’

Published:
Updated:

ಕೋಲಾರ: ‘ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ನನಗಿಂತಲೂ ಸಮರ್ಥರಿದ್ದಾರೆ. ಆ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಅತ್ಯಂತ ಯೋಗ್ಯ ವ್ಯಕ್ತಿ’ ಎಂದು ಮಾಜಿ ಸ್ಪೀಕರ್ ಕೆ.ಆರ್.ರಮೇಶ್‌ಕುಮಾರ್‌ ಹೇಳಿದರು.

ತಾಲ್ಲೂಕಿನ ಸುಗಟೂರು ಗ್ರಾಮದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ನನ್ನನ್ನು ಆಯ್ಕೆ ಮಾಡುವ ಬಗ್ಗೆ ಯಾವ ಚರ್ಚೆಯೂ ನಡೆದಿಲ್ಲ. ಎಲ್ಲವೂ ಕೇವಲ ಊಹಾಪೋಹ. ಪಕ್ಷದ ವರಿಷ್ಠರು ಈ ಬಗ್ಗೆ ನಿರ್ಧಾರ ಮಾಡುತ್ತಾರೆ’ ಎಂದರು.

‘ಪುನಃ ಕಾಂಗ್ರೆಸ್ ಪಕ್ಷದ ಸದಸ್ಯತ್ವ ಪಡೆದಿದ್ದೇನೆ. ನಾನು ಕಾಂಗ್ರೆಸ್‌ನ ಸಕ್ರಿಯ ಕಾರ್ಯಕರ್ತ. ಪಕ್ಷ ವಹಿಸಿದ ಕೆಲಸ ನಿರ್ವಹಿಸುವುದಷ್ಟೇ ನನ್ನ ಜವಾಬ್ದಾರಿ. ಗುಣಕ್ಕೆ ಮತ್ಸರ ಇರಬಾರದು. ಪಕ್ಷ ಬಲವರ್ಧನೆಗೆ ಹಾಗೂ ಸಮರ್ಥ ಪ್ರತಿಪಕ್ಷವಾಗಿ ಕೆಲಸ ಮಾಡಬೇಕಿದ್ದರೆ ಸಿದ್ದರಾಮಯ್ಯ ಅವರೇ ಸಮರ್ಥರು. ಉಪ ಚುನಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ’ ಎಂದು ನುಡಿದರು.

Post Comments (+)