ಹುಬ್ಬಳ್ಳಿ: ಇಲ್ಲಿನ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಕಿಮ್ಸ್) ಕೋವಿಡ್–19 ಪೀಡಿತ ವ್ಯಕ್ತಿಗೆ ನೀಡುತ್ತಿದ್ದ ಪ್ಲಾಸ್ಮಾ ಚಿಕಿತ್ಸೆ ಯಶಸ್ವಿಯಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡ ರಾಜ್ಯದ ಮೊದಲ ವ್ಯಕ್ತಿ ಇವರಾಗಿದ್ದಾರೆ.

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಲು ನಿರ್ಧರಿಸಲಾಗಿತ್ತು. ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸಿದರು. ಬುಧವಾರ ಅವರನ್ನು ಬಿಡುಗಡೆ ಮಾಡಲಾಯಿತು ಎಂದು ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರತಾನಿ ಹೇಳಿದರು.

ಮಹಾರಾಷ್ಟ್ರದಿಂದ ಬಂದಿದ್ದ ಹುಬ್ಬಳ್ಳಿಯ 65 ವರ್ಷದ ವ್ಯಕ್ತಿಗೆ(ಪಿ–2710), ಮೇ ಮೊದಲ ವಾರದಲ್ಲಿ ಕೋವಿಡ್ 19 ನಿಂದ ಗುಣಮುಖರಾಗಿದ್ದ ಹುಬ್ಬಳ್ಳಿಯ 64 ವರ್ಷದ(ಪಿ–363) ವ್ಯಕ್ತಿಯಿಂದ ಪ್ಲಾಸ್ಮಾ ಪಡೆದುಕೊಳ್ಳಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.