ಭಾನುವಾರ, ಮಾರ್ಚ್ 29, 2020
19 °C

ಮುಂಬೈ ಸೇರಿದ್ದ ಶಾಸಕರ ಪೈಕಿ ಐವರು ಬೆಂಗಳೂರಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನಗೊಂಡು ಮುಂಬೈ ಸೇರಿದ್ದ ಶಾಸಕರ ಪೈಕಿ ಕಾಂಗ್ರೆಸ್‌ನ ಐವರು ಅನರ್ಹ ಶಾಸಕರು ಸೋಮವಾರ ಮುಂಜಾನೆ ಬೆಂಗಳೂರಿಗೆ ಆಗಮಿಸಿದ್ದಾರೆ.

ರಾಜರಾಜೇಶ್ವರಿ ನಗರ ಕ್ಷೇತ್ರದ ಮುನಿರತ್ನ, ಕೆ.ಆರ್‌.ಪುರದ ಬೈರತಿ ಬಸವರಾಜು, ಹೊಸಕೋಟೆಯ ಎಂಟಿಬಿ ನಾಗರಾಜ್‌, ಯಶವಂತಪುರದ ಎಸ್‌.ಟಿ ಸೋಮಶೇಖರ್‌, ಯಲ್ಲಾಪುರದ ಶಿವರಾಮ್‌ ಹೆಬ್ಬಾರ್‌ ಅವರು ಮುಂಬೈನಿಂದ ದೇವನಹಳ್ಳಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಯಾರೊಬ್ಬರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲಿಲ್ಲ. ಅನರ್ಹ ಶಾಸಕರು ಬೆಂಗಳೂರಿಗೆ ಆಗಮಿಸುತ್ತಿದ್ದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಒದಗಿಸಲಾಗಿತ್ತು. 

ಭಿನ್ನಮತೀಯ ಚಟುವಟಿಕೆಯಲ್ಲಿ ಗುರುತಿಸಿಕೊಂಡಿದ್ದ ಒಟ್ಟು 17 ಶಾಸಕರು ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಮುಂಬೈ ಹಾರಿದ್ದರು. ಪಕ್ಷದ ವಿಪ್‌ ಉಲ್ಲಂಘನೆ, ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ 17 ಶಾಸಕರನ್ನೂ ಸ್ಪೀಕರ್‌ ರಮೇಶ್‌ಕುಮಾರ್‌ ಅವರು ಅನರ್ಹಗೊಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು