ಶನಿವಾರ, ಏಪ್ರಿಲ್ 4, 2020
19 °C

ಬೆಂಗಳೂರು ಮಹಾನಗರದಲ್ಲಿ ರಸ್ತೆ ಬದಿ ಆಹಾರ ಮಾರಾಟಕ್ಕೆ ನಿರ್ಬಂಧ: ಸಚಿವ ಶ್ರೀರಾಮುಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜಾಗತಿಕಮಟ್ಟದಲ್ಲಿ ಸಿಲಿಕಾನ್‌ ರಾಜಧಾನಿ ಎಂದೇ ಖ್ಯಾತಿಯಾಗಿರುವ ಬೆಂಗಳೂರು ಮಹಾನಗರದಲ್ಲಿ ಕಾಲರಾ, ಇತರೆ ಸಾಂಕ್ರಾಮಿಕ ರೋಗಗಳು ಹರಡದಂತೆ ತಡೆಯಲು ರಸ್ತೆ ಬದಿ ಆಹಾರ ಪದಾರ್ಥ ಮಾರಾಟ ಮಾಡುವುದನ್ನು ನಿರ್ಬಂಧಿಸಿ, ತೆರವುಗೊಳಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಈಗಾಗಲೇ ಬೆಂಗಳೂರು ಮಹಾನಗರ ‌ಪಾಲಿಕೆಯು ರಸ್ತೆ ಬದಿ ಆಹಾರ ಪದಾರ್ಥ ಮಾರಾಟ ಮಾಡುವುದನ್ನು ನಿರ್ಬಂಧಿಸಿ, ತೆರವುಗೊಳಿಸುತ್ತಿದೆ ಎಂದು ಅವರು ಹೇಳಿದ್ದಾರೆ. 

ನೈರ್ಮಲ್ಯದ ಕೊರತೆ ಇರುವುದರಿಂದ ಸಾರ್ವಜನಿಕರು ರಸ್ತೆ ಬದಿ‌ಯಲ್ಲಿ ಮಾರಾಟ ಮಾಡುವ ಆಹಾರ ಪದಾರ್ಥಗಳನ್ನು ಸೇವನೆ ಮಾಡಬಾರದು ಎಂದು ಸಚಿವರು ಮನವಿ ಮಾಡುತ್ತೇನೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು ‘ಕಾಲರ ಮತ್ತು ಸಾಂಕ್ರಾಮಿಕ ಕಾಯಿಲೆಗಳು ಹರಡದಂತೆ ತಡೆಯಲು ಬೆಂಗಳೂರು ಮಹಾನಗರ ‌ಪಾಲಿಕೆಯು ರಸ್ತೆ ಬದಿ ಆಹಾರ ಪದಾರ್ಥ ಮಾರಾಟ ಮಾಡುವುದನ್ನು ನಿರ್ಬಂಧಿಸಿ, ತೆರವುಗೊಳಿಸುತ್ತಿದೆ.‌ ನೈರ್ಮಲ್ಯದ ಕೊರತೆ ಇರುವುದರಿಂದ ಸಾರ್ವಜನಿಕರು ರಸ್ತೆ ಬದಿ‌ ಮಾರಲ್ಪಡುವ ಆಹಾರಗಳನ್ನು ಸೇವಿಸದಂತೆ ಈ ಮೂಲಕ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು