ಭಾನುವಾರ, ಫೆಬ್ರವರಿ 23, 2020
19 °C

ಬೆಂಗಳೂರು ಅಭಿವೃದ್ಧಿ ಖಾತೆ ಕೇಳುತ್ತೇನೆ: ನೂತನ ಸಚಿವ ಎಸ್.ಟಿ.ಸೋಮಶೇಖರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ‘ಬೆಂಗಳೂರು ನಗರಾಭಿವೃದ್ಧಿ ಖಾತೆ ಕೇಳಬೇಕು ಅಂದುಕೊಂಡಿದ್ದೇನೆ’ ಎಂದು ನೂತನ ಸಚಿವ ಎಸ್‌.ಟಿ.ಸೋಮಶೇಖರ್‌ ಅವರು ಹೇಳಿದರು.

ಇಲ್ಲಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ನೂತನ ಸಚಿವ ಎಸ್ .ಟಿ.ಸೋಮಶೇಖರ್

‘ಮುಖ್ಯಮಂತ್ರಿ ಬಳಿ ಇರುವ ಖಾತೆಗಳನ್ನೆ ನಾವು ವಹಿಸಿಕೊಳ್ಳಬೇಕಿದೆ. ಇಂತಹ ಖಾತೆ ಬೇಕೆಂದು ಪಟ್ಟು ಹಿಡಿಯುವುದಿಲ್ಲ. ನಾನು ಬೆಂಗಳೂರಿನವನೇ ಆಗಿದ್ದರಿಂದ, ನಗರಾಭಿವೃದ್ಧಿ ಕೇಳಬೇಕು ಅಂದುಕೊಂಡಿದ್ದೇನೆ. ಬೇರೆ ಯಾವ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ’ ಎಂದು ಅವರು ತಿಳಿಸಿದರು.

‘ಎಚ್‌.ವಿಶ್ವನಾಥ್‌, ಎಂ.ಟಿ.ಬಿ.ನಾಗರಾಜ್‌ ಅವರನ್ನು ಮೇ–ಜೂನ್‌ನಲ್ಲಿ ವಿಧಾನ ಪರಿಷತ್ತಿಗೆ ಆಯ್ಕೆ ಮಾಡುವ ಭರವಸೆಯನ್ನು ಮುಖ್ಯಮಂತ್ರಿ ನೀಡಿದ್ದಾರೆ’ ಎಂದು ಅವರು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು