ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವಿತೀಯ ಪಿಯುಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಮಾಸ್ಕ್‌ ಧರಿಸಿ ಹಾಜರಾಗುವಂತೆ ಸೂಚನೆ

Last Updated 22 ಮಾರ್ಚ್ 2020, 9:48 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ದೇಶದಾದ್ಯಂತ ಆತಂಕ ಸೃಷ್ಟಿಸಿರುವ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಮಾರ್ಚ್ 23 ರಂದು ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಕಲಾವತಿ ತಿಳಿಸಿದ್ದಾರೆ.

ಸೋಮವಾರ ಇಂಗ್ಲಿಷ್ ಭಾಷೆ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳು ತಮ್ಮಲ್ಲಿ ಲಭ್ಯವಿರುವ ಮಾಸ್ಕ್(ಮುಖಗುವುಸು), ಕರವಸ್ತ್ರ ಇತ್ಯಾದಿ ಯಾವುದೇ ಉಪಯುಕ್ತ ಬಟ್ಟೆಯಿಂದ ಬಾಯಿ ಮತ್ತು ಮೂಗನ್ನು ಮುಚ್ಚಿಕೊಂಡು ಪರೀಕ್ಷೆಗೆ ಹಾಜರಾಗಬೇಕು ಎಂದು ಹೇಳಿದ್ದಾರೆ.

ಮಾರ್ಚ್‌ 27ರಿಂದ ಆರಂಭವಾಗಬೇಕಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಂದೂಡಲು ಸರ್ಕಾರ ನಿರ್ಧರಿಸಿದೆ. ಆದರೆ, ದ್ವಿತೀಯ ಪಿಯುಸಿ ಪರೀಕ್ಷೆಗಳು ಕೊನೆಗೊಳ್ಳಲು ಇನ್ನೊಂದೇ ವಿಷಯ ಬಾಕಿ ಉಳಿದಿರುವದರಿಂದ ಅದನ್ನು ಎಂದಿನಂತೇ ಸೋಮವಾರ ನಡೆಸಲು ತೀರ್ಮಾನಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

‘ಸೋಮವಾರ ನಡೆಯಲಿರುವ ದ್ವಿತೀಯ ಪಿಯು ಅಂತಿಮ ವಿಷಯದ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬಹುದು.’ ಎಂದೂ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT