ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಬಾಕಿ ಪಾವತಿ: ಮಣಿದ ಸಿ.ಎಂ, ಮಾತುಕತೆ ಭರವಸೆ

ಕಬ್ಬು ಬೆಳೆಗಾರರ ಪ್ರತಿಭಟನೆ: ಮುಧೋಳ ಬಂದ್‌
Last Updated 16 ನವೆಂಬರ್ 2018, 20:19 IST
ಅಕ್ಷರ ಗಾತ್ರ

ಬೆಳಗಾವಿ/ಮುಧೋಳ: ಸಕ್ಕರೆ ಕಾರ್ಖಾನೆಗಳು ರೈತರಿಗೆ ಕೊಡ ಬೇಕಾದ ಬಾಕಿ ಕೊಡಿಸುವಂತೆ ಮತ್ತು ವೈಜ್ಞಾನಿಕ ದರ ನಿಗದಿಪಡಿಸುವಂತೆ ಒತ್ತಾಯಿಸಿ ಬಾಗಲಕೋಟೆ ಜಿಲ್ಲೆ ಮುಧೋಳ ಹಾಗೂ ಬೆಳಗಾವಿಯಲ್ಲಿ ನಡೆಯುತ್ತಿದ್ದ ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಕಾರಣ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಶುಕ್ರವಾರ ಸಂಜೆ ಕೊನೆಗೂ ಮಧ್ಯ ಪ್ರವೇಶಿಸಿದರು.

ರೈತ ಮುಖಂಡರೊಂದಿಗೆ ಮೊಬೈಲ್ ಮೂಲಕ ಮಾತನಾಡಿದ ಮುಖ್ಯಮಂತ್ರಿ, ‘ನ. 19ರಂದು ಬೆಳಗಾವಿಯಲ್ಲಿ ಸಭೆ ನಡೆಸುತ್ತೇನೆ. ಅಹವಾಲು ಆಲಿಸುತ್ತೇನೆ’ ಎಂದು ಭರವಸೆ ನೀಡಿದರು. ನಂತರ ಬೆಳಗಾವಿ ಪ್ರತಿಭಟನಕಾರರು ಹೋರಾಟವನ್ನು ಹಿಂಪಡೆದರು. ಆದರೆ, ಸಿಎಂ ಮಾತುಕತೆ ಫಲಪ್ರದವಾಗುವವರೆಗೂ ಧರಣಿ ಮುಂದುವರೆಸುವುದಾಗಿ ಮುಧೋಳದ ರೈತ ಮುಖಂಡರು ತಿಳಿಸಿದ್ದಾರೆ.

ಬಂದ್‌ ಯಶಸ್ವಿ: ಹದಿನೈದು ದಿನಗಳಿಂದ ನಿರಂತರ ಪ್ರತಿಭಟನೆ ನಡೆಸುತ್ತಿದ್ದ ಮುಧೋಳದ ರೈತರು ಶುಕ್ರವಾರ ಕರೆ ನೀಡಿದ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಯಿತು. ವಕೀಲರು ಸಹ ಸಾಥ್‌ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT