ಶನಿವಾರ, ಮಾರ್ಚ್ 6, 2021
28 °C

ಮಂಡ್ಯ: ಸಿಲ್ವರ್‌ ಜ್ಯೂಬಿಲಿ ಉದ್ಯಾನದಲ್ಲಿ ‘ಸ್ವಾಭಿಮಾನಿ ವಿಜಯೋತ್ಸವ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ಪಕ್ಷೇತರ ಅಭ್ಯರ್ಥಿಯಾಗಿ ಜಯಗಳಿಸಿರುವ ಎ.ಸುಮಲತಾ ಅವರ ‘ಸ್ವಾಭಿಮಾನಿ ವಿಜಯೋತ್ಸವ’ ನಗರದ ಸಿಲ್ವರ್‌ ಜ್ಯೂಬಿಲಿ ಉದ್ಯಾನದಲ್ಲಿ ಬುಧವಾರ (ಮೇ 29) ನಡೆಯಲಿದೆ.

ಅಂಬರೀಷ್‌ ಜನ್ಮದಿನದಂದೇ ವಿಜಯೋತ್ಸವ ನಡೆಯುತ್ತಿದ್ದು ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಅಂಬರೀಷ್‌ ಭಾವಚಿತ್ರಕ್ಕೆ ಕ್ಷೀರಾಭಿಷೇಕ, ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನೂ ಆಯೋಜಿಸಲಾಗಿದೆ.

ನಟರಾದ ಯಶ್‌, ದರ್ಶನ್‌, ದೊಡ್ಡಣ್ಣ, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್, ಅಂಬರೀಷ್‌ ಪುತ್ರ ಅಭಿಷೇಕ್‌ ಗೌಡ ಭಾಗವಹಿಸಲಿದ್ದಾರೆ. ‘ಸ್ನೇಹಶೀಲ‘ ಹಾಗೂ ‘ಅಂಬರೀಷ್; ವ್ಯಕ್ತಿ– ವ್ಯಕ್ತಿತ್ವ ವರ್ಣರಂಜಿತ ಬದುಕು‘ ಪುಸ್ತಕಗಳು ಬಿಡುಗಡೆಯಾಗಲಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು