ಮಂಡ್ಯದ ಜನ ಇತಿಹಾಸ ಸೃಷ್ಟಿಸಿದ್ದಾರೆ, ಸದ್ಯಕ್ಕೆ ಯಾವುದೇ ಪಕ್ಷ ಸೇರಲ್ಲ: ಸುಮಲತಾ

ಸೋಮವಾರ, ಜೂನ್ 17, 2019
27 °C

ಮಂಡ್ಯದ ಜನ ಇತಿಹಾಸ ಸೃಷ್ಟಿಸಿದ್ದಾರೆ, ಸದ್ಯಕ್ಕೆ ಯಾವುದೇ ಪಕ್ಷ ಸೇರಲ್ಲ: ಸುಮಲತಾ

Published:
Updated:
Prajavani

ಬೆಂಗಳೂರು: ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಅವರನ್ನು ಸೋಲಿಸಿರುವ ಸುಮಲತಾ ಅಂಬರೀಷ್ ಭಾನುವಾರ ಬಿಜೆಪಿ ಮುಖಂಡರಾದ ಎಸ್.ಎಂ.ಕೃಷ್ಣ, ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾದರು. ಗೆಲುವಿಗೆ ಸಹಕಾರ ನೀಡಿದ್ದಕ್ಕೆ ಧನ್ಯವಾದ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ‘ಪಕ್ಷೇತರವಾಗಿ ಸ್ಪರ್ಧಿಸಿದ್ದು, ಮಂಡ್ಯ ಜನರು ಆಯ್ಕೆ ಮಾಡಿದ್ದಾರೆ. ಸದ್ಯಕ್ಕೆ ಬಿಜೆಪಿ ಸೇರುವುದಿಲ್ಲ. ಪಕ್ಷೇತರ ಅಭ್ಯರ್ಥಿ ಯಾವುದೇ ಪಕ್ಷ ಸೇರುವ ಅವಕಾಶ ಕಾನೂನಿನಲ್ಲಿ ಇಲ್ಲ. ಹಾಗಾಗಿ ಯಾವುದಾದರೂ ಒಂದು ಪಕ್ಷಕ್ಕೆ ಬೆಂಬಲ ನೀಡಬಹುದಷ್ಟೆ. ಚುನಾವಣೆಯಲ್ಲಿ ಬಿಜೆಪಿ ನನ್ನ ಪರ ನಿಂತಿತ್ತು. ಅವರಿಗೆ ಧನ್ಯವಾದ. ಮಂಡ್ಯ ಜನರ ಅಭಿಪ್ರಾಯ ಪಡೆದು ಬಳಿಕ ಯಾವ ಪಕ್ಷ ಸೇರಬೇಕು ಎಂಬ ನಿರ್ಧಾರ ಕೈಗೊಳ್ಳುತ್ತೇನೆ’ ಎಂದು ತಿಳಿಸಿದರು.

‘ಸುನಾಮಿ ರೀತಿ ಬಿಜೆಪಿ ಗೆಲುವು ಸಾಧಿಸಿದೆ. ನನ್ನ ಗೆಲುವು ಒಂದು ರೀತಿಯ ಇತಿಹಾಸ. ಮಂಡ್ಯದ ಜನ ಇತಿಹಾಸ ಸೃಷ್ಟಿಸಿದ್ದಾರೆ. ಎಲ್ಲಾ ಪಕ್ಷದವರು ಸಹಕಾರ ನೀಡಿದ್ದಾರೆ’ ಎಂದು ಅವರು ಹೇಳಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 36

  Happy
 • 0

  Amused
 • 1

  Sad
 • 1

  Frustrated
 • 4

  Angry

Comments:

0 comments

Write the first review for this !