ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್, ಬಿಜೆಪಿಯಿಂದ ಅಭಿವೃದ್ಧಿ ಕುಂಠಿತ

Last Updated 5 ಫೆಬ್ರುವರಿ 2018, 6:41 IST
ಅಕ್ಷರ ಗಾತ್ರ

ಮೈಸೂರು: ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ಪಟ್ಟಭದ್ರ ಹಿತಾಸಕ್ತಿಗಳಿಗೆ ಪೂರಕವಾಗಿ ತಮ್ಮ ಹಿಡನ್ ಅಜೆಂಡಾ ಗಳನ್ನು ಜನರ ಮೇಲೆ ಏರುತ್ತಿವೆ ಎಂದು ಜೆಡಿಎಸ್
ರಾಜ್ಯ ಪ್ರಧಾನ ಕಾರ್ಯದರ್ಶಿ ಹರಿಹರ ಆನಂದಸ್ವಾಮಿ ದೂರಿದರು.

ಗರೀಬಿ ಹಠವೋ, ಅಚ್ಛೇದಿನ್‌ ನಂತಹ ಬಣ್ಣದ ಘೋಷಣೆಗಳು ನೊಂದಜನರ ಬದುಕಿನಲ್ಲಿ ಯಾವುದೇ ಬದಲಾವಣೆ ತಂದಿಲ್ಲ. ಬಹುಸಂಸ್ಕೃತಿಯ ದೇಶದ ನಾಡಿಯನ್ನು ಅರಿಯುವಲ್ಲಿ ಈ ರಾಷ್ಟ್ರೀಯ ಪಕ್ಷಗಳು ವಿಫಲವಾಗಿವೆ. ಇವುಗಳ ಆಡಳಿತಾವಧಿಯಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಇಂತಹ ಸಂದರ್ಭದಲ್ಲಿ ಪ್ರಾದೇಶಿಕ ಪಕ್ಷಗಳ ಬಲವರ್ಧನೆ ಮಾಡಬೇಕಿದೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಾದೇಶಿಕ ಅನನ್ಯತೆ ಕಾಪಾಡಲು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ನೇತೃತ್ವವನ್ನು ನಾಡಿನ ಜನತೆ ಬೆಂಬಲಿಸಲಿದೆ. 20 ತಿಂಗಳು ಮುಖ್ಯ ಮಂತ್ರಿಯಾಗಿ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ನೀಡಿದ ಅಭಿವೃದ್ಧಿ ಕೆಲಸಗಳನ್ನು ರಾಜ್ಯದ ಜನತೆ ಗಮನಿಸಿದೆ. ಇವರು ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯದ ಆಡಳಿತವನ್ನು ಹೊಸ ಮನ್ವಂತರಕ್ಕೆ ಕೊಂಡೊಯ್ಯಲಿದ್ದಾರೆ ಎಂದರು.

ಜನಾಂದೋಲನ ಅಧ್ಯಕ್ಷ ಶ್ರೀಕಾಂತ್‌, ಜೆಡಿಎಸ್ ಮುಖಂಡರಾದ ಬಸವಲಿಂಗಯ್ಯ, ನಾಗರಾಜ್‌, ಎಪಿಎಂಸಿ ಸದಸ್ಯ ಜವರಯ್ಯ, ದಲಿತ ಸಂಘರ್ಷ ಸಮಿತಿ ಮುಖಂಡ ಮಲ್ಲೇಶ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT