ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ ಲೋಕಸಭಾ ಕ್ಷೇತ್ರ: ನಾಮಪತ್ರ ಸಲ್ಲಿಸಿದ ಸುರೇಶ ಅಂಗಡಿ

ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ ಸ್ಪರ್ಧೆ
Last Updated 28 ಮಾರ್ಚ್ 2019, 9:10 IST
ಅಕ್ಷರ ಗಾತ್ರ

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ ಸುರೇಶ ಅಂಗಡಿ ನಾಮಪತ್ರ ಸಲ್ಲಿಸಿದರು.

ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ, ಶಾಸಕರಾದ ಆನಂದ ಮಾಮನಿ, ಮಹಾದೇವಪ್ಪ ಯಾದವಾಡ, ಅಭಯ ಪಾಟೀಲ, ಅನಿಲ ಬೆನಕೆ, ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯಸಚೇತಕ ಮಹಾಂತೇಶ ಕವಗಿಮಠ ಜೊತೆಗಿದ್ದರು.

ಈ ವೇಳೆ ಮಾತನಾಡಿದ ಪ್ರಭಾಕರ ಕೋರೆ, 'ಈ ಬಾರಿಯೂ ಸುರೇಶ ಅಂಗಡಿ ಗೆಲುವು ನಿಶ್ಚಿತ. ಮೂರು ಲಕ್ಷ ಮತಗಳ ಅಂತರದಿಂದ ಅವರು ಗೆಲ್ಲುತ್ತಾರೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಯಾರೇ ಆದರೂ ಅಲ್ಲಿಯೂ ಬಿಜೆಪಿ ಗೆಲ್ಲುತ್ತದೆ. ನಾನೂ ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಆದರೆ ರಾಜ್ಯಸಭಾ ಸದಸ್ಯನ ಅಧಿಕಾರದ ಅವಧಿ ಇನ್ನೂ ಒಂದು ವರ್ಷವಿದೆ. ಹೀಗಾಗಿ ಈಗ ಸ್ಪರ್ಧೆ ಬೇಡ ಎಂದು ಪಕ್ಷದ ವರಿಷ್ಠರು ಹೇಳಿದರು. ಹೀಗಾಗಿ ನಾನು ಸುಮ್ಮನಾದೆ' ಎಂದು ಪ್ರತಿಕ್ರಿಯೆ ನೀಡಿದರು.

ಈಗ ರಮೇಶ ಕತ್ತಿ ಮತ್ತು ಅಣ್ಣಾಸಾಹೇಬ ಜೊಲ್ಲೆ ನಡುವೆ ಟಿಕೆಟ್‌ಗಾಗಿ ಪೈಪೋಟಿ ನಡೆದಿದೆ. ಟಿಕೆಟ್ ಯಾರಿಗೆ ಸಿಕ್ಕರೂ ನಾವು ಪಕ್ಷದ ಗೆಲುವಿಗೆ ಶ್ರಮಿಸುತ್ತೇವೆ. ನಾವು ಪಕ್ಷದ ಶಿಸ್ತಿನ ಸಿಪಾಯಿಗಳು' ಎಂದು ಕೋರೆ ಹೇಳಿದರು.

'ಐಟಿ ದಾಳಿ ರಾಜಕೀಯ ಪ್ರೇರಿತ ಅಲ್ಲ. ದುಡ್ಡು ಇದ್ದೋರ ಮೇಲೆ ಐಟಿ ದಾಳಿ ನಡೆಯೋದು ಸಹಜ. ಇದೊಂದು ಸಹಜವಾದ ಪ್ರಕ್ರಿಯೆ' ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT