ಸೋಮವಾರ, ಜನವರಿ 20, 2020
20 °C

ಆಸ್ತಿ ಹಾನಿ ಮಾಡಿದರೆ ಕಂಡಲ್ಲಿ ಗುಂಡಿಕ್ಕಲು ಸಲಹೆ ನೀಡುತ್ತೇನೆ: ಸುರೇಶ್‌ ಅಂಗಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ‘ರೈಲ್ವೆ ಆಸ್ತಿ ಹಾನಿ ಮಾಡುವವರ ನಿಯಂತ್ರಣಕ್ಕೆ ಅನಿವಾರ್ಯವಾದಲ್ಲಿ ‘ಕಂಡಲ್ಲಿ ಗುಂಡಿಕ್ಕಿ’ ಎಂದು ರಾಜ್ಯ ಸರ್ಕಾರಗಳಿಗೆ ಸಲಹೆ ಮಾಡುತ್ತೇನೆ’ ಎಂದು ರೈಲ್ವೆ ಸಚಿವ ಸುರೇಶ ಅಂಗಡಿ ಹೇಳಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪೌರತ್ವ ತಿದ್ದುಪಡಿ ವಿರುದ್ಧದ ಹೋರಾಟ ಹಿಂಸಾತ್ಮಕ ರೂಪ ಪಡೆಯುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಕೆಲವು ಸಮಾಜ ವಿರೋಧಿ ಶಕ್ತಿಗಳು ಹಾಗೂ ಅಕ್ರಮ ವಲಸಿಗರು ರೈಲ್ವೆ ಆಸ್ತಿ ನಾಶ ಪಡಿಸಲು ಮುಂದಾಗಿದ್ದಾರೆ. ಅವರ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ನಿಯಂತ್ರಣಕ್ಕೆ ಬಾರದಿದ್ದರೆ, ಕಂಡಲ್ಲಿ ಗುಂಡಿಕ್ಕಬೇಕು’ ಎಂದರು.

‘ಪೌರತ್ವ ತಿದ್ದುಪಡಿಯಿಂದ ದೇಶದ ಪ್ರಜೆಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ. ಆದರೂ, ಪ್ರತಿಪಕ್ಷಗಳು ಜನರನ್ನು ತಪ್ಪು ದಾರಿಗೆ ಎಳೆಯುವ ಮೂಲಕ ಸರ್ಕಾರದ ವಿರುದ್ಧ ಎತ್ತಿಕಟ್ಟುವ ಕೆಲಸ ಮಾಡುತ್ತಿವೆ’ ಎಂದು ಆರೋಪಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು