ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಆತಂಕ ನಿವಾರಣೆಯಾದ ನಂತರ ಪರೀಕ್ಷೆಗಳ ದಿನಾಂಕ ಪ್ರಕಟ: ಸುರೇಶ್‌ ಕುಮಾರ್‌

Last Updated 14 ಏಪ್ರಿಲ್ 2020, 15:10 IST
ಅಕ್ಷರ ಗಾತ್ರ

ಬೆಂಗಳೂರು: ಲಾಕ್ ಡೌನ್‌ ಅವಧಿ ಮುಗಿದ ಬಳಿಕ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಗಳ ಬಗ್ಗೆ ನಾನೇ ಖುದ್ದಾಗಿ ಪ್ರಕಟಿಸುತ್ತೇನೆ. ಪೋಷಕರು, ವಿದ್ಯಾರ್ಥಿಗಳು‌ ಅನಗತ್ಯ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಪ್ರಧಾನಿ‌ ನರೇಂದ್ರ ಮೋದಿಯವರು ಕೊರೊನಾ ಲಾಕ್ ಡೌನ್ ಅವಧಿಯನ್ನು ಮೇ 3ರವರೆಗೆ ವಿಸ್ತರಿಸಿರುವ ಹಿನ್ನೆಲೆಯಲ್ಲಿ, ಎಸ್ಸೆಸ್ಸೆಲ್ಸಿಪರೀಕ್ಷಾ ಅವಧಿಯನ್ನು ಸದ್ಯಕ್ಕೆ‌ ಪ್ರಕಟಿಸಲಾಗುವುದಿಲ್ಲವೆಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಜನ ಜೀವನ ಸಹಜ ಸ್ಥಿತಿಗೆ ಮರಳಿದ ಬಳಿಕ ಪರೀಕ್ಷೆಗಳ ದಿನಾಂಕವನ್ನು ತಾವೇ ಖುದ್ದಾಗಿ ಪ್ರಕಟಿಸುವುದಾಗಿ ಸಚಿವರು ಸ್ಪಷ್ಟ ಪಡಿಸಿದ್ದು, ಪೋಷಕರು, ವಿದ್ಯಾರ್ಥಿಗಳು ಅನವಶ್ಯಕ ಗೊಂದಲಕ್ಕೆ ಒಳಗಾಗಬಾರದೆಂದು ಮನವಿ‌ ಮಾಡಿದ್ದಾರೆ.

ಅಲ್ಲದೇಎಸ್ಸೆಸ್ಸೆಲ್ಸಿವಿದ್ಯಾರ್ಥಿಗಳಿಗಾಗಿ ಆನ್‌ಲೈನ್‌ತರಗತಿಗಳನ್ನು ಪ್ರಾರಂಭಿಸಲಾಗಿದೆ ಎಂದು ಕೆಲವು ಮಾಧ್ಯಮಗಳಲ್ಲಿ ಆಗಿರುವ ವರದಿ ಕುರಿತು ಪ್ರತಿಕ್ರಿಯಿಸಿದ ಸುರೇಶ್‌ ಕುಮಾರ್‌, ಸಾರ್ವಜನಿಕ‌ ಶಿಕ್ಷಣ‌ ಇಲಾಖೆ‌ ಇಂತಹ ಯಾವುದೇ ಕ್ರಮವನ್ನು ಆರಂಭಿಸಿಲ್ಲವೆಂದು ತಿಳಿಸಿದ್ದಾರೆ. ಪೋಷಕರು, ವಿದ್ಯಾರ್ಥಿಗಳು ಇಂತಹ ಮಾಹಿತಿಗಳ ಬಗ್ಗೆ ಜಾಗರೂಕರಾಗಿರಬೇಕೆಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT