ಭಾನುವಾರ, ಆಗಸ್ಟ್ 1, 2021
27 °C
ಭಗೀರಥ ಗುರುಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ ಎಚ್ಚರಿಕೆ

ಉಪ್ಪಾರ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಲು ಸ್ವಾಮೀಜಿ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸದುರ್ಗ: ‘ಹಿಂದುಳಿದಿರುವ ಉಪ್ಪಾರ ಸಮುದಾಯಕ್ಕೆ ಬಿಜೆಪಿ ಸರ್ಕಾರವು ರಾಜಕೀಯ ಪ್ರಾತಿನಿಧ್ಯ ನೀಡದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ಭಗೀರಥ ಗುರುಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ ಎಚ್ಚರಿಕೆ ನೀಡಿದರು.

ಮಠದಲ್ಲಿ ಮಂಗಳವಾರ ನಡೆದ ಉಪ್ಪಾರ ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ‘ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗಿಂತ ಉಪ್ಪಾರರು ಹಿಂದುಳಿದಿದ್ದಾರೆ ಎಂದು ಎಲ್ಲಾ ಆಯೋಗದ ವರದಿಗಳೂ ಹೇಳಿವೆ. ರಾಜ್ಯದಲ್ಲಿ 40 ಲಕ್ಷ ಜನಸಂಖ್ಯೆ ಇರುವ ಈ ಸಮಾಜದಿಂದ ಕನಿಷ್ಠ 10 ಶಾಸಕರು, ಇಬ್ಬರು ಸಂಸದರಾಗಿ ಆಯ್ಕೆಯಾಗಬೇಕು. ರಾಜಕೀಯ ಶಕ್ತಿ ಹಾಗೂ ಸ್ಥಾನಮಾನ ಸಿಗದಿರುವುದರಿಂದ ನಮ್ಮ ಸಮಾಜಕ್ಕೆ ಅಭಿವೃದ್ಧಿ ಮರೀಚಿಕೆಯಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

‘ಗಂಗಾನದಿ ದಡದಲ್ಲಿ ಭಗೀರಥ ಮಹರ್ಷಿ ಪುತ್ಥಳಿ ನಿರ್ಮಿಸಬೇಕು. ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣದ ಟ್ರಸ್ಟ್‌ನಲ್ಲಿ ನಮ್ಮ ಹೆಸರು ಸೇರಿಸಬೇಕು. ಉಪ್ಪಾರರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು. ಉಪ್ಪಾರ ಅಭಿವೃದ್ಧಿ ನಿಗಮಕ್ಕೆ ಪ್ರತಿವರ್ಷ ₹ 100 ಕೋಟಿ ಅನುದಾನ ಮೀಸಲಿಡಬೇಕು. ಉಪ್ಪಾರ ಸಮಾಜದ ಅರ್ಹ ವ್ಯಕ್ತಿಯೊಬ್ಬರಿಗೆ ಬಿಜೆಪಿಯಿಂದ ವಿಧಾನಪರಿಷತ್‌ ಸ್ಥಾನ ನೀಡಬೇಕು. ಕನಿಷ್ಠ ಇಬ್ಬರನ್ನಾದರೂ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು. ಮಠದ ಮುಂಭಾಗದಲ್ಲಿ ಹಾದುಹೋಗಿರುವ ಭದ್ರಾ ಮೇಲ್ದಂಡೆ ಯೋಜನೆ ಕಾಲುವೆಗೆ ಭಗೀರಥ ಮಹರ್ಷಿ ಹೆಸರು ನಾಮಕರಣ ಮಾಡಬೇಕು’ ಎಂದು ಸ್ವಾಮೀಜಿ ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು