ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರಾಜನಹಳ್ಳಿಯಿಂದ ರಾಜಧಾನಿ’ಗೆ ಬೃಹತ್ ಪಾದಯಾತ್ರೆಗೆ ಚಾಲನೆ

ಶೇ 7.5ರಷ್ಟು ಮೀಸಲಿಗೆ ಆಗ್ರಹ: ಸ್ವಾಮೀಜಿಗಳ ಬೆಂಬಲ
Last Updated 9 ಜೂನ್ 2019, 20:14 IST
ಅಕ್ಷರ ಗಾತ್ರ

ದಾವಣಗೆರೆ: ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಶೇ 7.5ಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿ ‘ರಾಜನಹಳ್ಳಿಯಿಂದ ರಾಜಧಾನಿ’ಗೆ ಬೃಹತ್ ಪಾದಯಾತ್ರೆಗೆ ಹರಿಹರ ತಾಲ್ಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಿಂದ ಭಾನುವಾರ ಚಾಲನೆ ನೀಡಲಾಯಿತು.

ಮಠದ ಆವರಣದಲ್ಲಿರುವ ಪುಣ್ಯಾನಂದಪುರಿ ಸ್ವಾಮೀಜಿ ಗದ್ದುಗೆಗೆ ಪೂಜೆ ಸಲ್ಲಿಸುವ ಮೂಲಕ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ ಚಾಲನೆ ನೀಡಿದರು.

ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಹೊಸಳ್ಳಿ ವೇಮನಾನಂದ ಪೀಠದ ಬಸವಕುಮಾರ ಸ್ವಾಮೀಜಿ, ಭಗೀರಥ ಪೀಠದ ಪುರೋಷೋತ್ತಮನಂದ ಸ್ವಾಮೀಜಿ, ನಂದಿಗುಡಿಯ ಸಿದ್ದರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಚಿತ್ರದುರ್ಗದ ಇಮ್ಮಡಿ ಕೇತೇಶ್ವರ ಸ್ವಾಮೀಜಿ ಬೆಂಬಲ ಸೂಚಿಸಿದರು.

ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಮಾತನಾಡಿ, ‘ರಾಜ್ಯದಲ್ಲಿ 50ಲಕ್ಷಕ್ಕೂ ಹೆಚ್ಚು ಜನಸಂಖ್ಯೆ
ಯನ್ನು ಹೊಂದಿರುವ ನಾಯಕ ಸಮಾಜಕ್ಕೆ ಕೇವಲ ಶೇ 3ರಷ್ಟು ಮೀಸಲಾತಿ ನೀಡಿ ಅನ್ಯಾಯ ಮಾಡ
ಲಾಗಿದೆ. ಕೇಂದ್ರದ ಮಾದರಿಯಲ್ಲಿಯೇ ರಾಜ್ಯ ಸರ್ಕಾರ ಮೀಸಲಾತಿ ನೀಡಬೇಕು. ಶಿಕ್ಷಣ ಮತ್ತು ಉದ್ಯೋಗದಲ್ಲಿ ರಾಜ್ಯ ಸರ್ಕಾರ ಮೀಸಲಾತಿ ನೀಡದೇ ಅನ್ಯಾಯ ಮಾಡಿದ್ದು, ಜೂನ್ 26ರೊಳಗೆ ತೀರ್ಮಾನ ಕೈಗೊಳ್ಳದೇ ಇದ್ದಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು’ ಎಂದು ಎಚ್ಚರಿಸಿದರು.

ಸಚಿವ ಸತೀಶ್ ಜಾರಕಿಹೊಳಿ, ಶಾಸಕರಾದ ಬಿ.ಶ್ರೀರಾಮುಲು, ಟಿ.ರಘುಮೂರ್ತಿ, ಎಸ್‌.ರಾಮಪ್ಪ, ಎಚ್‌.ವಿ.ರಾಮಚಂದ್ರಪ್ಪ, ರೇಣುಕಾಚಾರ್ಯ, ಕಂಪ್ಲಿ ಗಣೇಶ್, ಬಳ್ಳಾರಿ ಸಂಸದ ದೇವೇಂದ್ರಪ್ಪ ಬೆಂಬಲ ಸೂಚಿಸಿದರು.

ಬಳ್ಳಾರಿ, ಹಾವೇರಿ, ದಾವಣಗರೆ, ಚಿತ್ರದುರ್ಗ ಸೇರಿ ವಿವಿಧ ಜಿಲ್ಲೆಗಳ ಸಮಾಜದ ಮುಖಂಡರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT