ಗುರುವಾರ , ಜುಲೈ 29, 2021
23 °C

ಪದಗ್ರಹಣ ಕುರಿತು ಮುಖ್ಯಮಂತ್ರಿ ಹೇಳಿಕೆಗೆ ಕೃತಜ್ಞತೆ ಸಲ್ಲಿಸಿದ ಡಿಕೆಶಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ತಮ್ಮ ಪದಗ್ರಹಣಕ್ಕೆ ಅಡ್ಡಿ ಇಲ್ಲ ಎಂದು ಹೇಳಿಕೆ ನೀಡಿರುವ ಮುಖ್ಯಮಂತ್ರಿ ಅವರಿಗೆ ಕೃತಜ್ಞತೆ ಸಲ್ಲಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ‌.ಶಿವಕುಮಾರ್, ಇದೇ 14ರಂದು ಪದಗ್ರಹಣ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

‘ಸರ್ಕಾರದ ಆದೇಶ ಬಂದ ಕಾರಣ 14ರ ಪದಗ್ರಹಣ ಕಾರ್ಯಕ್ರಮ ರದ್ದುಪಡಿಸಲು 7,800 ಪಂಚಾಯಿತಿ ಮಟ್ಟಕ್ಕೆ ಸಂದೇಶ ರವಾನಿಸಲಾಗಿದೆ. ಮತ್ತೆ ಕಾರ್ಯಕ್ರಮ ಸಜ್ಜುಗೊಳಿಸುವುದಕ್ಕೆ ಒಂದಿಷ್ಟು ಸಮಯ ಬೇಕು. ಸಿದ್ಧತೆ ತಕ್ಷಣದಿಂದ ಪುನರಾರಂಭಗೊಳ್ಳಲಿದ್ದು, ಪಕ್ಷದ ಹಿರಿಯ ನಾಯಕರೊಂದಿಗೆ ಚರ್ಚಿಸಿ ದಿನಾಂಕವನ್ನು ಶೀಘ್ರ ಪ್ರಕಟಿಸಲಿದ್ದೇನೆ’ ಎಂದು ಅವರು ಗುರುವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಮುಖ್ಯಮಂತ್ರಿ ಅವರೇ ಜಗತ್ತಿಗೆ ತಿಳಿಯುವ ರೀತಿಯಲ್ಲಿ ಮಾಧ್ಯಮದಲ್ಲಿ ಹೇಳಿದ ಬಳಿಕ ಬೇರೆ ಆದೇಶದ ಅಗತ್ಯ ಇಲ್ಲ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು