ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಸಗುಡಿಸುವವರ ಸಂಬಳ ನೇರ ಬ್ಯಾಂಕ್ ಖಾತೆಗೆ

ಪಂಚಾಯತ್‌ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಭರವಸೆ
Last Updated 3 ನವೆಂಬರ್ 2019, 19:53 IST
ಅಕ್ಷರ ಗಾತ್ರ

ಬೆಂಗಳೂರು: ‘ಗ್ರಾಮ ಪಂಚಾಯಿತಿಗಳಲ್ಲಿ ದುಡಿಯುತ್ತಿರುವ ಬಿಲ್‌ ಕಲೆಕ್ಟರ್‌ ಗಳು,ಪೌರಕಾರ್ಮಿಕರು, ಸ್ವಚ್ಛತಾಗಾರರಿಗೆ ಆನ್‌ಲೈನ್ ಮೂಲಕನೇರವಾಗಿ ಬ್ಯಾಂಕ್ ಖಾತೆಗೆ ಸಂಬಳ ಜಮಾ ಆಗು ವಂತೆ ವ್ಯವಸ್ಥೆ ಮಾಡಲಾಗುವುದು’ ಎಂದು ಪಂಚಾಯತ್‌ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್ ಭರವಸೆ ನೀಡಿದರು.

‘ಐಪಿಡಿ ಸಾಲಪ್ಪನವರ ವರದಿ’ ಅನುಷ್ಠಾನಕ್ಕೆ ಒತ್ತಾ ಯಿಸಿಕರ್ನಾಟಕ ರಾಜ್ಯ ಪಂಚಾಯಿತಿ ನೌಕರರ ಸಂಘ ಭಾನುವಾರ ಆಯೋಜಿಸಿದ್ದ ‘ಗ್ರಾಮ ಪಂಚಾಯಿತಿಗಳಲ್ಲಿ ಕಸಗುಡಿಸುವವರ ಹಾಗೂ ಸ್ವಚ್ಛತಾಗಾರರ ರಾಜ್ಯ ಸಮಾವೇಶ’ದಲ್ಲಿ ಅವರು ಮಾತನಾಡಿದರು.

‘ಪಂಚಾಯಿತಿಗಳಲ್ಲಿ ಕೆಳ ಹಂತದಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ ಪ್ರತಿ ತಿಂಗಳು ಸಂಬಳ ಸಿಗುತ್ತಿಲ್ಲ ಎಂದು ಹಲವು ದೂರುಗಳು ಬಂದಿವೆ. ಹೀಗಾಗಿ ನಿಗದಿತ ಸಮಯದಲ್ಲಿ ಸಂಬಳ ಕೈಸೇರು ವಂತೆ ಮಾಡಲಾಗುವುದು’ ಎಂದರು.

‘ಗ್ರಾ.ಪಂ. ನೌಕರರಿಗೆ ವೇತನ ಹೆಚ್ಚಳ, ನಿವೃತ್ತಿ ವೇತನ, ಆರೋಗ್ಯವಿಮೆ, ಕೆಲಸ ಕಾಯಂ ಗೊಳಿಸುವ ಸೌಲಭ್ಯಗಳನ್ನು ಜಾರಿಗೆ ತರಲಾಗಿದೆ. ಆದರೆ, ಅನು ಷ್ಠಾನಕ್ಕೆ ತರುವಲ್ಲಿ ವಿಳಂಬವಾಗುತ್ತಿದ್ದು, ಹಂತಹಂತವಾಗಿ ಕಾರ್ಯರೂಪಕ್ಕೆ ತರಲಾಗುವುದು’ ಎಂದುಪಂಚಾಯತ್‌ ರಾಜ್ ಇಲಾಖೆ ಸಲಹೆಗಾರ ಎಂ.ಕೆ.ಕೆಂಪೇಗೌಡ ತಿಳಿಸಿದರು.

ಗ್ರಾ.ಪಂ. ನೌಕರರ ಸಂಘದ ಅಧ್ಯಕ್ಷ ಮಾರುತಿ ಮಾನ್ಪಡೆ, ‘ಸಿಬ್ಬಂದಿಗೆ ಸಂಬಳ ನೀಡುವಲ್ಲಿ ಪಂಚಾಯಿತಿ ಆಡಳಿತ ಮಂಡಳಿಗಳು ತಾರತಮ್ಯ ಮಾಡುತ್ತಿವೆ. ನಗರ ಹಾಗೂ ಗ್ರಾಮೀಣ ಭಾಗದ ಪೌರ ಕಾರ್ಮಿಕರಿಗೆ ಸಿಗುತ್ತಿರುವ ಸೌಲಭ್ಯಗಳಲ್ಲಿ ವ್ಯತ್ಯಾಸವಿದೆ. ಐಪಿಡಿ ಸಾಲಪ್ಪ ವರದಿ ಪ್ರಕಾರ 500 ಮಂದಿಗೆ ಒಬ್ಬ ಪೌರಕಾರ್ಮಿಕ ಇರಬೇಕು. ಪ್ರಸ್ತುತ ಪ್ರತಿ 5 ಸಾವಿರ ಜನರಿಗೆ ಒಬ್ಬ ಪೌರಕಾರ್ಮಿಕರಿದ್ದಾರೆ. ಸಾಲಪ್ಪ ವರದಿ ಅನುಷ್ಠಾನಗೊಳಿಸಬೇಕು’ ಎಂದರು.

‘ದಲಿತ ಹಕ್ಕುಗಳ ಸಮಿತಿ’ ಸಂಚಾಲಕ ಗೋಪಾಲಕೃಷ್ಣ ಅರಳಹಳ್ಳಿ, ಗ್ರಾ.ಪಂ.ನೌಕರರ ಸಂಘದ ಪ್ರಧಾನ ಕಾರ್ಯ ದರ್ಶಿ ಜಿ.ರಾಮಕೃಷ್ಣ ಭಾಗವಹಿಸಿದ್ದರು.

ಬೇಡಿಕೆಗಳು
* ಹಣಕಾಸು ಇಲಾಖೆ ಸಕಾಲದಲ್ಲಿ ಹಣ ಬಿಡುಗಡೆ ಮಾಡಬೇಕು
* ಕಸಗುಡಿಸುವವರ ಕೆಲಸ ಕಾಯಂ ಮಾಡಬೇಕು
* 1,521 ಗ್ರಾ.ಪಂ.ಗಳನ್ನು ಮೇಲ್ದರ್ಜೆಗೇರಿಸಬೇಕು
* ಪಿಂಚಣಿ ಸೌಲಭ್ಯಕ್ಕಾಗಿ ಟ್ರಸ್ಟ್‌ ರಚಿಸಬೇಕು
* ಸೇವಾ ನಿಯಮಾವಳಿ ತಿದ್ದುಪಡಿ ಮಾಡಬೇಕು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT