ಭಾನುವಾರ, ಆಗಸ್ಟ್ 1, 2021
27 °C

ತಹಶೀಲ್ದಾರ್ ಕೊಲೆ ಆರೋಪಿ ವಿರುದ್ಧ ಗೂಂಡಾ ಕಾಯ್ದೆಯನ್ವಯ ಪ್ರಕರಣ: ಸಚಿವ ಆರ್‌.ಅಶೋಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ತಹಶೀಲ್ದಾರ್‌ ಚಂದ್ರಮೌಳೇಶ್ವರ ಅವರನ್ನು ಕೊಲೆ ಮಾಡಿದ ಆರೋಪಿ ವಿರುದ್ಧ ಗೂಂಡಾ ಕಾಯ್ದೆಯನ್ವಯ ಪ್ರಕರಣವನ್ನು ದಾಖಲಿಸಲಾಗುವುದು ಎಂದು ಕಂದಾಯ ಸಚಿವ ಆರ್‌.ಅಶೋಕ ಹೇಳಿದ್ದಾರೆ.

ಮುಂದೆಂದೂ ಇಂತಹ ಘಟನೆ ಸಂಭವಿಸದಂತೆ ಎಚ್ಚರವಹಿಸುವ ಅಗತ್ಯವಿದೆ. ಅದಕ್ಕಾಗಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಅವರು ಸುದ್ದಿಗಾರರಿಗೆ ಶುಕ್ರವಾರ ತಿಳಿಸಿದರು.

‘ಈ ವಿಚಾರವಾಗಿ ಜಿಲ್ಲಾಧಿಕಾರಿ ಜತೆ ದೂರವಾಣಿ ಮೂಲಕ ಮಾತನಾಡಿದ್ದೇನೆ’ ಎಂದು ತಿಳಿಸಿದರು.

ಮುಖ್ಯಮಂತ್ರಿಯವರ ಘೋಷಣೆ ಪ್ರಕಾರ, ಮೃತರ ಕುಟುಂಬಕ್ಕೆ ತಕ್ಷಣವೇ ₹25 ಲಕ್ಷ ಪರಿಹಾರ ನೀಡಲಾಗುವುದು ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು