ಮಂಗಳವಾರ, ಮಾರ್ಚ್ 2, 2021
26 °C

ರಾಜೀನಾಮೆ ಪತ್ರ ಪಡೆದು ಸ್ವೀಕೃತಿ ನೀಡಲು ಸಿಬ್ಬಂದಿಗೆ ತಿಳಿಸಿದ್ದೇನೆ: ಸ್ಪೀಕರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಶಾಸಕರ ರಾಜಿನಾಮೆ ಪತ್ರಗಳನ್ನು ಪಡೆದು ಅವರಿಗೆ ಸ್ವೀಕೃತಿ ಪತ್ರ ನೀಡುವಂತೆ ನಮ್ಮ ಕಚೇರಿಯ ಸಿಬ್ಬಂದಿಗೆ ಸೂಚನೆ ನೀಡಿದ್ದೇನೆ ಎಂದು ವಿಧಾನಸಭಾ ಸ್ಪೀಕರ್‌ ಕೆ.ಆರ್‌.ರಮೇಶ್‌ಕುಮಾರ್‌ ತಿಳಿಸಿದ್ದಾರೆ.

‘ನಾನು ನನ್ನ ಮಗಳನ್ನು ಕಾರ್ಯನಿಮಿತ್ತ ಕರೆದೊಯ್ಯಬೇಕಿತ್ತು. ಅದಕ್ಕಾಗಿಯೇ ನಾನು ಮನೆಗೆ ಹೋಗಿದ್ದೆ. ರಾಜೀನಾಮೆಯನ್ನು ಪಡೆದು ಸ್ವೀಕೃತಿ ಪತ್ರವನ್ನು ನೀಡುವಂತೆ ನನ್ನ ಕಚೇರಿ ಸಿಬ್ಬಂದಿಗೆ ತಿಳಿಸಿದ್ದೇನೆ’ ಎಂದು ಅವರು ಹೇಳಿದ್ದಾರೆ.

‘11 ಶಾಸಕರು ರಾಜೀನಾಮೆ ನೀಡಿದ್ದಾರೆ. ಭಾನುವಾರ ರಜೆ ಇದ್ದು, ಸೋಮವಾರ ಕಚೇರಿಗೆ ಹೋಗಿ ನೋಡುತ್ತೇನೆ’ ಎಂದು ರಮೇಶ್‌ಕುಮಾರ್‌ ಅವರು ತಿಳಿಸಿದ್ದಾಗಿ ಎಎನ್‌ಐ ಟ್ವೀಟ್‌ ಮಾಡಿದೆ.

ರಾಜ್ಯ ರಾಜಕೀಯದ ಕ್ಷಿಪ್ರ ಬೆಳವಣಿಗೆಯಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ನ 12 ಶಾಸಕರು ಶನಿವಾರ ರಾಜೀನಾಮೆ ಸಲ್ಲಿಸಿದ್ದಾರೆ. ಶಾಸಕರು ಶನಿವಾರ ಬೆಳಿಗ್ಗೆ ವಿಧಾನಸೌಧದಲ್ಲಿ ಸ್ಪೀಕರ್‌ ಕಚೇರಿಗೆ ತೆರಳಿದರು. ಸ್ಪೀಕರ್‌ ಕಚೇರಿಯಲ್ಲಿ ಇಲ್ಲದ ಕಾರಣ ಅವರ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ರಾಜೀನಾಮೆ ಸಲ್ಲಿಸಿ ಹೊರ ಬಂದರು.

* ಇವನ್ನೂ ಓದಿ...

ರಾಜೀನಾಮೆ ಪರ್ವ | ರಾಜಭವನಕ್ಕೆ ತೆರಳಿದ 8 ಮಂದಿ ಶಾಸಕರು

ಸಿದ್ರಾಮು’ ಕಟ್ಟಿಹಾಕಲು ಗೌಡರ ‘ಪಟ್ಟು’

*  ಮದ್ದಿಲ್ಲದ ರೋಗ; ಮಧ್ಯಂತರ ರಾಗ​

ಈಗೇಕೆ ಸಿಡಿಯಿತು ದೇವೇಗೌಡರ ‘ಮಧ್ಯಂತರ ಚುನಾವಣೆ’ ಬಾಂಬ್

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.