ಬುಧವಾರ, ಫೆಬ್ರವರಿ 19, 2020
21 °C

ಮಾರಕಾಸ್ತ್ರಗಳಿಂದ ಹೊಡೆದು ಉದ್ಯಮಿ ಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ತಲಘಟ್ಟಪುರ ಠಾಣೆ ವ್ಯಾಪ್ತಿಯಲ್ಲಿ ಉದ್ಯಮಿ ಮಾಧವ್ (70) ಎಂಬುವರನ್ನು ಶುಕ್ರವಾರ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದೆ.

‘ಸ್ಥಳೀಯ ನಿವಾಸಿ ಮಾಧವ್, ಪರಿಚಯಸ್ಥರನ್ನು ಮಾತನಾಡಿಸಲು ಬೆಳಿಗ್ಗೆ ಮನೆಯಿಂದ ಹೊರಗಡೆ ಹೋಗಿದ್ದರು. ಮಧ್ಯಾಹ್ನ 1.45ರ ಸುಮಾರಿಗೆ ವಾಪಸು ಮನೆಗೆ ಬರುವಾಗ ಮಾರ್ಗ ಮಧ್ಯೆಯೇ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಕೃತ್ಯ ಎಸಗಿ ಪರಾರಿಯಾಗಿದ್ದಾರೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ಮಾಧವ್ ಹಾಗೂ ಸಂಬಂಧಿಕರ ನಡುವೆ ಆಸ್ತಿ ಹಂಚಿಕೆ ಸಂಬಂಧ ಕೆಲದಿನಗಳಿಂದ ಮನಃಸ್ತಾಪ ಏರ್ಪಟ್ಟಿತ್ತು. ಜಗಳವೂ ಆಗಿತ್ತು. ಅದುವೇ ಕೃತ್ಯಕ್ಕೆ ಕಾರಣವಿರಬಹುದೆಂಬ ಅನುಮಾನವಿದೆ. ಸಂಬಂಧಿಕರನ್ನು ವಿಚಾರಣೆಗೆ ಒಳಪಡಿಸಿ ಮಾಹಿತಿ ಪಡೆಯುತ್ತಿದ್ದೇವೆ. ಬೇರೆ ಬೇರೆ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ’ ಎಂದರು.

ಸುಪಾರಿ ನೀಡಿ ಹತ್ಯೆ ಶಂಕೆ: ‘ಹೆಲ್ಮೆಟ್ ಧರಿಸಿಕೊಂಡು ಬಂದಿದ್ದ ದುಷ್ಕರ್ಮಿಗಳು, ಮಾಧವ್‌ ಅವರನ್ನು ಅಡ್ಡಗಟ್ಟಿ ಕೊಲೆ ಮಾಡಿ ಹೋಗಿದ್ದಾರೆ. ಅವರು ಸುಫಾರಿ ಪಡೆದು ಕೃತ್ಯ ಎಸಗಿರುವ ಶಂಕೆಯೂ ಇದೆ’ ಎಂದು ಅಧಿಕಾರಿ ಹೇಳಿದರು.

‘ಘಟನಾ ಸ್ಥಳ ಹಾಗೂ ಅಕ್ಕ–ಪಕ್ಕದಲ್ಲಿರುವ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ’ ಎಂದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು