ಭಾನುವಾರ, ಜನವರಿ 19, 2020
25 °C

ಪಶು ವೈದ್ಯರಿಗೆ ತಾ.ಪಂ ಜವಾಬ್ದಾರಿ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಪಶುಸಂಗೋಪನಾ ಇಲಾಖೆಯಲ್ಲಿ ವೈದ್ಯರ ಕೊರತೆ ತೀವ್ರವಾಗಿದ್ದು, ಅವರಿಗೆ ಪಶು ಚಿಕಿತ್ಸೆಯ ಜವಾಬ್ದಾರಿ ನೀಡುವ ಬದಲು ಸಂಬಂಧವೇ ಇಲ್ಲದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ
ಹುದ್ದೆಗಳಿಗೆ ನಿಯೋಜನೆ ಮಾಡಿರುವುದು ಶಾಸಕರ ಅಸಮಾಧಾನಕ್ಕೆ ಕಾರಣವಾಗಿದೆ.

ಗ್ರಾಮೀಣಾಭಿವೃದ್ಧಿ ಇಲಾಖೆಗೆ ಪತ್ರ ಬರೆದಿರುವ ಕೆಲ ಶಾಸಕರು, ತಾ.ಪಂ.ಗೆ ನಿಯೋಜಿಸಿರುವ ಪಶುವೈದ್ಯರು ಅಧಿಕಾರ ವಹಿಸಿಕೊಳ್ಳಲು ಅವಕಾಶ ನೀಡಬಾರದು ಎಂದು ಒತ್ತಾಯಿಸಿದ್ದಾರೆ.

ಪಶುಸಂಗೋಪನೆ ಇಲಾಖೆಯು ಇತ್ತೀಚೆಗೆ 8 ಮಂದಿ ಪಶುವೈದ್ಯರನ್ನು ತಾ.ಪಂ ಕಾರ್ಯನಿರ್ವಹಕ ಅಧಿಕಾರಿಗಳ ಹುದ್ದೆಗಳಿಗೆ ನಿಯೋಜಿಸಿ ಆದೇಶಿಸಿತ್ತು. ಈ ಆದೇಶಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಹ ಒಪ್ಪಿಗೆ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ.

ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಹುದ್ದೆ ಆಡಳಿತಾತ್ಮಕ ಸ್ವರೂಪದ್ದಾಗಿದ್ದು, ಇಲ್ಲಿಗೆ ಸಾಕಷ್ಟು ಅನುದಾನ ಹರಿದು ಬರುತ್ತದೆ. ಈ ಹಿನ್ನೆಲೆಯಲ್ಲೇ ನಿಯೋಜನೆಗೆ ಒತ್ತಡಗಳು ಸಾಮಾನ್ಯ. ಈಗಲೂ ಒತ್ತಡಕ್ಕೆ ಮಣಿದು ವರ್ಗಾವಣೆ ಮಾಡಲಾಗಿದೆ.  ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಂಪರ್ಕಿಸದೆ ನಿಯೋಜಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

ಪಶುವೈದ್ಯರ ನಿಯೋಜನೆಯನ್ನು ಆರ್‌ಡಿಪಿಆರ್‌ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಖ್ ಸಹ ಒಪ್ಪಿಕೊಂಡಿಲ್ಲ ಎಂದು ಮೂಲಗಳು ತಿಳಿಸಿವೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು