ಮಳೆಗಾಲದಲ್ಲೂ ಟ್ಯಾಂಕರ್‌ ನೀರು!

ಶುಕ್ರವಾರ, ಜೂಲೈ 19, 2019
26 °C

ಮಳೆಗಾಲದಲ್ಲೂ ಟ್ಯಾಂಕರ್‌ ನೀರು!

Published:
Updated:
Prajavani

ಹೊಸಪೇಟೆ: ಸನಿಹದಲ್ಲೇ ತುಂಗಭದ್ರಾ ಜಲಾಶಯವಿದ್ದರೂ ವಿಜಯನಗರ ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ತೀವ್ರ ಸಮಸ್ಯೆ ಇದೆ.

ಮಳೆಗಾಲ ಆರಂಭವಾದರೂ ನಗರದ ಶಿರಸಿನಕಲ್ಲು ಪ್ರದೇಶದಲ್ಲಿ ಟ್ಯಾಂಕರ್‌ ಮೂಲಕ ನೀರು ಪೂರೈಸಲಾಗುತ್ತಿದೆ. ನಗರದ 22, 24ನೇ ವಾರ್ಡ್‌ ವ್ಯಾಪ್ತಿಯ ಹಲವು ಬಡಾವಣೆಗಳಿಗೆ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ. ಇತ್ತೀಚೆಗೆ ಈ ಭಾಗದ ಮಹಿಳೆಯರು ಖಾಲಿ ಕೊಡಗಳೊಂದಿಗೆ ನಗರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದರು.

ಕಾಲುವೆಗಳಲ್ಲಿ ನೀರು ಹರಿಸದ ಕಾರಣ ತಾಲ್ಲೂಕಿನ ಕಮಲಾಪುರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಪಟ್ಟಣದ ಬಹುತೇಕ ವಾರ್ಡ್‌ಗಳಿಗೆ ಟ್ಯಾಂಕರ್‌ ಮೂಲಕ ನೀರು ಕೊಡಲಾಗುತ್ತಿದೆ. ತಾಲ್ಲೂಕಿನ ಒಟ್ಟು 16 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತೀವ್ರ ಸಮಸ್ಯೆಯಿದ್ದು, 19 ಕೊಳವೆಬಾವಿಗಳನ್ನು ಖಾಸಗಿಯವರಿಂದ ಬಾಡಿಗೆಗೆ ಪಡೆದು ನೀರು ಪೂರೈಸಲಾಗುತ್ತಿದೆ.

ಜೂನ್‌ 1ರಿಂದ ಜು. 11ರ ವರೆಗೆ ತಾಲ್ಲೂಕು ವ್ಯಾಪ್ತಿಯಲ್ಲಿ ಶೇ 23ರಷ್ಟು ಕೊರತೆ ಮಳೆಯಾಗಿದೆ. ಶೇ 10ರಷ್ಟು ಪ್ರದೇಶದಲ್ಲಷ್ಟೇ ಬಿತ್ತನೆ ಆಗಿದೆ. ಸತತ ನಾಲ್ಕು ವರ್ಷಗಳಿಂದ ಬರದಿಂದ ಕಂಗೆಟ್ಟಿರುವ ತಾಲ್ಲೂಕಿನ ಜನತೆಗೆ ಈ ವರ್ಷವೂ ಬರದ ಆತಂಕ ಕಾಡುತ್ತಿದೆ.

ತುಂಗಭದ್ರಾ ಜಲಾಶಯದಲ್ಲಿ ಸದ್ಯ 5.25 ಟಿ.ಎಂ.ಸಿ. ಅಡಿ ನೀರಿನ ಸಂಗ್ರಹವಿದೆ. ಹೋದ ವರ್ಷ ಇದೇ ದಿನ 50.07 ಟಿ.ಎಂ.ಸಿ. ಅಡಿ ನೀರಿನ ಸಂಗ್ರಹವಿತ್ತು. ಇದು ಕೂಡ ಅಚ್ಚುಕಟ್ಟು ಪ್ರದೇಶದ ರೈತರು ಆತಂಕಕ್ಕೆ ಒಳಗಾಗುವಂತೆ ಮಾಡಿದೆ. ಮಳೆಯೂ ಇಲ್ಲ, ಜಲಾಶಯದಲ್ಲಿ ಹೇಳಿಕೊಳ್ಳುವಂತಹ ನೀರಿನ ಸಂಗ್ರಹ ಇಲ್ಲ. 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !